ಮಂಡ್ಯ: ನಾಗಮಂಗಲ ಗಲಭೆ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿ ಗ್ರಾಮ ತೊರೆದಿದ್ದ ಯುವಕ ಸಾವಿಗೀಡಾಗಿರುವ ಘಟನೆ ನಡೆದಿದೆ. ನಾಗಮಂಗಲದ ಬದ್ರಿಕೊಪ್ಪಲು ಗ್ರಾಮದ ಕಿರಣ್ (23) ಸಾವನ್ನಪ್ಪಿದ ಯುವಕ. ಬ್ರೈನ್‌ಸ್ಟ್ರೋಕ್‌ನಿಂದಾಗಿ ಮೃತಪಟ್ಟಿದ್ದಾನೆ.
ಸೆ.11 ರ ರಾತ್ರಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಾಗಮಂಗಲದಲ್ಲಿ ಗಲಭೆ ಆಗಿತ್ತು. ಘಟನೆ ನಡೆದ ನಂತರ ಯುವಕ ಗ್ರಾಮ ತೊರೆದಿದ್ದ. ನಿನ್ನೆ ಕಿರಣ್‌ಗೆ ಬ್ರೈನ್‌ಸ್ಟ್ರೋಕ್ ಆಗಿತ್ತು. ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.
Ad