Bengaluru 21°C
Ad

ನಾಗಮಂಗಲ ಕೋಮುಗಲಭೆ: ಬರೊಬ್ಬರಿ 2.66 ಕೋಟಿ ಮೌಲ್ಯದ ಆಸ್ತಿ ನಾಶ

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಾಗಮಂಗಲದಲ್ಲಿ ಕೋಮುಗಲಭೆ ಸಂಭವಿಸಿತ್ತು. ಈ ಗಲಭೆಯಲ್ಲಿ ಕಿಡಿಗೇಡಿಗಳು ಹಚ್ಚಿದ ಬೆಂಕಿ ಮತ್ತು ಪೆಟ್ರೋಲ್​ ಬಾಂಬ್​ನಿಂದ ಹಲವು ಅಂಗಡಿಗಳು, ಸರಕುಗಳು ಸುಟ್ಟು ಭಸ್ಮವಾಗಿವೆ. ಗಲಭೆಯಿಂದಾಗಿ ನಾಗಮಂಗಲದಲ್ಲಿ ಅಪಾರ ಮೌಲ್ಯದ ಆಸ್ತಿ-ಪಾಸ್ತಿ ನಾಶವಾಗಿದೆ. ಗಲಭೆಯಿಂದ ಒಟ್ಟು 2.66 ಕೋಟಿ ಮೌಲ್ಯದ ಆಸ್ತಿ ನಾಶವಾಗಿದೆ.

ಮಂಡ್ಯ : ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಾಗಮಂಗಲದಲ್ಲಿ ಕೋಮುಗಲಭೆ ಸಂಭವಿಸಿತ್ತು. ಈ ಗಲಭೆಯಲ್ಲಿ ಕಿಡಿಗೇಡಿಗಳು ಹಚ್ಚಿದ ಬೆಂಕಿ ಮತ್ತು ಪೆಟ್ರೋಲ್​ ಬಾಂಬ್​ನಿಂದ ಹಲವು ಅಂಗಡಿಗಳು, ಸರಕುಗಳು ಸುಟ್ಟು ಭಸ್ಮವಾಗಿವೆ. ಗಲಭೆಯಿಂದಾಗಿ ನಾಗಮಂಗಲದಲ್ಲಿ ಅಪಾರ ಮೌಲ್ಯದ ಆಸ್ತಿ-ಪಾಸ್ತಿ ನಾಶವಾಗಿದೆ. ಗಲಭೆಯಿಂದ ಒಟ್ಟು 2.66 ಕೋಟಿ ಮೌಲ್ಯದ ಆಸ್ತಿ ನಾಶವಾಗಿದೆ.

ನಾಗಮಂಗಲ‌ ಪಟ್ಟಣದಾದ್ಯಂತ 26 ಅಂಗಡಿಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. 1 ಕೋಟಿ 47 ಲಕ್ಷ ಮೌಲ್ಯದ ಕಟ್ಟಡಗಳು ಸುಟ್ಟು ಭಸ್ಮವಾಗಿವೆ. 1 ಕೋಟಿ 18 ಲಕ್ಷ ಮೌಲ್ಯದ ಸರಕು ಬೆಂಕಿ ಕೆನ್ನಾಲಿಗೆಯಲ್ಲಿ ಸುಟ್ಟು ಕರಕಲಾಗಿದೆ. ಹಾನಿಗೊಳಗಾದ ಸಂತ್ರಸ್ತರಿಗೆ ಸರ್ಕಾರ ಪರಿಹಾರ ನೀಡುವ ಭರವಸೆ ನೀಡಿದೆ.

Ad
Ad
Nk Channel Final 21 09 2023