ಮಂಡ್ಯ: ಮರಳಗಾಲ ಗ್ರಾಮದ ಅರ್ಚಕ ಸಿದ್ದಲಿಂಗಪ್ಪ(46) ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಮರಳಗಾಲ ಗ್ರಾಮದ ನಾಲೆಯಲ್ಲಿ ಸಿದ್ದಲಿಂಗಪ್ಪ ಶವ ಪತ್ತೆಯಾಗಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಮರಳಗಾಲ ಗ್ರಾಮದ ಬಳಿ ಘಟನೆ ನಡೆದಿದೆ.

ಸಿಡಿಎಸ್ ನಾಲೆ ಬಳಿ ಅರ್ಚಕನ ಬೈಕ್ ಹಾಗೂ ರಕ್ತ ಸಿಕ್ತ ಚಪ್ಪಲಿ ಪತ್ತೆಯಾಗಿತ್ತು. ಇದನ್ನು ಕಂಡ ಗ್ರಾಮಸ್ಥರು ಕೊಲೆ ಮಾಡಿ ನಾಲೆಗೆ ತಳ್ಳಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಎಸ್ಪಿ ಸೇರಿದಂತೆ ಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.