ಮಂಡ್ಯ: ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಮಂಡ್ಯದಲ್ಲಿ ಬೃಹತ್ ಪ್ರತಿಭಟನೆ ನಡೆದಿದೆ. ಖರೀದಿ ಕೇಂದ್ರಗಳ ತೆರೆಯುವಂತೆ ಬಿಜೆಪಿ ರೈತ ಮೋರ್ಚಾದಿಂದ ಮಂಡ್ಯದ ಸಂಜಯ ವೃತ್ತದಲ್ಲಿ ಪ್ರತಿಭಟನೆ ನಡೆದಿದೆ.
ಎತ್ತಿನಗಾಡಿ ಮೂಲಕ ರಸ್ತೆಗಿಳಿದು ಬೃಹತ್ ಹೋರಾಟ ನಡೆಸಿದ್ದಾರೆ. ರಾಜ್ಯ ಸರ್ಕಾರ ಹಾಗೂ ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಖರೀದಿ ಕೇಂದ್ರ ತೆರೆಯುವಲ್ಲಿ ವಿಫಲ, ರೈತರ ಬೇಡಿಕೆ ಈಡೇರಿಸುವಲ್ಲಿ ವಿಫಲ ಎಂದು ಘೋಷಣೆ ಕೂಗಿದ್ದಾರೆ.
ನಾಟಿ ಕೋಳಿ ತಿಂದು ಎಂಜಾಯ್ ಮಾಡ್ತಿರೋ ಸಿದ್ದರಾಮಯ್ಯ ಎಂದು ವ್ಯಂಗ್ಯವಾಡಿದ್ದಾರೆ. ತಕ್ಷಣವೇ ಖರೀದಿ ಕೇಂದ್ರ ತೆರೆದು ಬೆಳೆದ ಬೆಳೆಗೆ ಬೆಂಬಲ ನೀಡಿ ರೈತರಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿದ್ದಾರೆ.
ಪ್ರತಿಭಟನೆಯಲ್ಲಿ ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಅಶೋಕ್ ಜಯರಾಮ್, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್, ಎಸ್ಪಿ ಸ್ವಾಮಿ, ಇಂಡುವಾಳು ಸಚ್ಚಿದಾನಂದ, ಅಶೋಕ್, ರಘು, ಮಂಜುನಾಥ್, ಸೇರಿ ಹಲವರು ಭಾಗಿಯಾಗಿದ್ದಾರೆ.

