Bengaluru 27°C
Ad

ಗಣೇಶ ಮೆರವಣಿಗೆ ವೇಳೆ ಭುಗಿಲೆದ್ದ ಗಲಭೆ : ನಿಷೇಧಾಜ್ಞೆ, ಶಾಲೆ-ಕಾಲೇಜುಗಳಿಗೆ ರಜೆ

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕು ಬುಧವಾರ ರಾತ್ರಿ ಅಕ್ಷರಶಃ ಹೊತ್ತಿ ಉರಿದಿದೆ. ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕೋಮುಗಲಭೆ ಉಂಟಾಗಿದ್ದು ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಸಂಜೆ 6.30ರ ವೇಳೆಗೆ ಗಣೇಶನ ವಿಸರ್ಜನಾ ಮೆರವಣಿಗೆ ಆರಂಭವಾಗಿದೆ. ನಾಗಮಂಗಲ ಪಟ್ಟಣದ ಬದರಿಕೊಪ್ಪಲಿನಲ್ಲಿ ಕಳೆದ 5 ದಿನಗಳ ಹಿಂದೆ ಗಣೇಶನ ಮೂರ್ತಿ ಪ್ರತಿಷ್ಠಾಪಿಸಲಾಗಿತ್ತು. ಬುಧವಾರ ಸಂಜೆ ಅದ್ಧೂರಿಯಾಗಿ ವಿಸರ್ಜನಾ ಮೆರವಣಿಗೆ ಹಮ್ಮಿಕೊಂಡಿದ್ದರು.

ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕು ಬುಧವಾರ ರಾತ್ರಿ ಅಕ್ಷರಶಃ ಹೊತ್ತಿ ಉರಿದಿದೆ. ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕೋಮುಗಲಭೆ ಉಂಟಾಗಿದ್ದು ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಸಂಜೆ 6.30ರ ವೇಳೆಗೆ ಗಣೇಶನ ವಿಸರ್ಜನಾ ಮೆರವಣಿಗೆ ಆರಂಭವಾಗಿದೆ. ನಾಗಮಂಗಲ ಪಟ್ಟಣದ ಬದರಿಕೊಪ್ಪಲಿನಲ್ಲಿ ಕಳೆದ 5 ದಿನಗಳ ಹಿಂದೆ ಗಣೇಶನ ಮೂರ್ತಿ ಪ್ರತಿಷ್ಠಾಪಿಸಲಾಗಿತ್ತು. ಬುಧವಾರ ಸಂಜೆ ಅದ್ಧೂರಿಯಾಗಿ ವಿಸರ್ಜನಾ ಮೆರವಣಿಗೆ ಹಮ್ಮಿಕೊಂಡಿದ್ದರು.

ಬದರಿಕೊಪ್ಪಲಿನಿಂದ ಹೊರಟ ಗಣೇಶನ ವಿಸರ್ಜನಾ ಮೆರವಣಿಗೆ ಮಂಡ್ಯ ಸರ್ಕಲ್ ಮಾರ್ಗವಾಗಿ ತೆರಳಿತ್ತು. ಯಾ ಅಲ್ಲಾ ಮಸೀದಿ ಮತ್ತು ದರ್ಗಾ ಮುಂಭಾಗದ ರಸ್ತೆಯತ್ತ ಮೆರವಣಿಗೆ ಹೊರಟಿತ್ತು. ಆದರೆ ನಾಗಮಂಗಲದ ಮಂಡ್ಯ ಸರ್ಕಲ್ ಬಳಿಯೇ ಕೆಲ ಅನ್ಯಕೋಮಿನ ಯುವಕರು ಮೆರವಣಿಗೆಗೆ ತಡೆಯೊಡ್ದಿದ್ದಾರೆ. ಇನ್ನೇನು ಅನ್ಯಕೋಮಿನ ಯುವಕರು ಏಕಾಏಕಿ ಗಣೇಶ ವಿಸರ್ಜನಾ ಮೆರವಣಿಗೆಯತ್ತ ಕಲ್ಲು ತೂರಾಟ ನಡೆಸಿದ್ದಾರೆ.

ಹಿಂದೂಗಳು ಮತ್ತು ಅನ್ಯಕೋಮಿನ ಯುವಕರ ನಡುವೆ ವಾಕ್ಸಮರ, ತಳ್ಳಾಟ ನೂಕಾಟ ನಡೆದಿದೆ. ಬಳಿಕ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಸಿಗೊಳಿಸಿದ್ದಾರೆ. ನಂತರ ಕಲ್ಲುತೂರಾಟ ನಡೆಸಿದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ ಹಿಂದೂಗಳು ನಾಗಮಂಗಲ ಪೊಲೀಸ್ ಠಾಣೆ ಮುಂದೆಯೇ ಗಣೇಶನ ವಿಗ್ರಹವನ್ನಿಟ್ಟು ಪ್ರತಿಭಟನೆ ನಡೆಸಿದ್ದಾರೆ.

ಅನ್ಯಕೋಮಿನ ಯುವಕರ ಗುಂಪು ಸಿಕ್ಕಸಿಕ್ಕ ಅಂಗಡಿಗಳ ಮೇಲೆ ದಾಳಿ ನಡೆಸಿದೆ. ಪೆಟ್ರೋಲ್ ಬಾಂಬ್‌ಗಳನ್ನು ತೂರಿದೆ. ಗುಜರಿ ಅಂಗಡಿಯೊಂದು ಧಗಧಗಿಸಿ ಉರಿಯಿತು. ಬೈಕ್ ಶೋರೂಂ ಒಂದನ್ನು ಧ್ವಂಸಗೊಳಿಸಲಾಯಿತು. ಬೈಕ್‌ಗಳಿಗೆ ಬೆಂಕಿ ಹಚ್ಚಿದ್ದು ಹೊತ್ತಿ ಉರಿದವು.

ಬೆಂಕಿ ಹಚ್ಚಿದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ, ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್, ಮಂಡ್ಯ ಜಿಲ್ಲಾ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪರಿಸ್ಥಿತಿ ಹತೋಟಿಯಲ್ಲಿದ್ದು ಸೆಪ್ಟೆಂಬರ್​ 14ರವರೆಗೆ ಸೆಕ್ಷನ್ 144 ಅಡಿ ನಿಷೇಧಾಜ್ಞೆ ಹೇರಲಾಗಿದೆ.

ಇಂದು ನಾಗಮಂಗಲ ಬಂದ್: ಶಾಲಾ-ಕಾಲೇಜುಗಳಿಗೆ ರಜೆ

ನಾಗಮಂಗಲದಲ್ಲಿ ಸದ್ಯ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಮುಂಜಾಗ್ರತಾ ಕ್ರಮವಾಗಿ ಇಂದು ನಾಗಮಂಗಲದಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇನ್ನು ಘಟನೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಸಂಘಟನೆ ಇಂದು ನಾಗಮಂಗಲ ಬಂದ್‌ಗೆ ಕರೆ ಕೊಟ್ಟಿದೆ

Ad
Ad
Nk Channel Final 21 09 2023