Bengaluru 27°C
Ad

ಬೆಂಗಳೂರು-ಮೈಸೂರು‌ ಎಕ್ಸ್​​ಪ್ರೆಸ್ ವೇನಲ್ಲಿ ಸರಣಿ ಅಪಘಾತ: 5 ಕಾರುಗಳು ಜಖಂ

ಬೆಂಗಳೂರು-ಮೈಸೂರು‌ ಎಕ್ಸ್​​ಪ್ರೆಸ್ ವೇನಲ್ಲಿ ಸರಣಿ ಅಪಘಾತ ಸಂಭವಿಸಿ ಐದು ಕಾರುಗಳು ಜಖಂ ಆಗಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗೆಜ್ಜಲಗೆರೆ ಗ್ರಾಮದ ಬಳಿ ಈ ಸರಣಿ ಅಪಘಾತ ಸಂಭವಿಸಿದೆ.

ಮಂಡ್ಯ: ಬೆಂಗಳೂರು-ಮೈಸೂರು‌ ಎಕ್ಸ್​​ಪ್ರೆಸ್ ವೇನಲ್ಲಿ ಸರಣಿ ಅಪಘಾತ ಸಂಭವಿಸಿ ಐದು ಕಾರುಗಳು ಜಖಂ ಆಗಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗೆಜ್ಜಲಗೆರೆ ಗ್ರಾಮದ ಬಳಿ ಈ ಸರಣಿ ಅಪಘಾತ ಸಂಭವಿಸಿದೆ.

ಬೆಂಗಳೂರಿನಿಂದ ಮೈಸೂರಿಗೆ ತೆರಳುವಾಗ ಅವಘಡ ನಡೆದಿದೆ. ಮದ್ದೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಯಾವುದೇ ಸಾವು ನೋವು ಸಂಭವಿಸಿದ ವರದಿಯಾಗಿಲ್ಲ.

ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ತೀವ್ರತೆಗೆ ಕೆಲವು ಕಾರುಗಳು ನುಜ್ಜುಗುಜ್ಜಾಗಿವೆ. ಸ್ಥಳಕ್ಕೆ ಆಗಮಿಸಿರುವ ಪೊಲೀಸರು, ಅಪಘಾತ ಹೇಗೆ ಸಂಭವಿಸಿದೆ ಅನ್ನುವುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

Ad
Ad
Nk Channel Final 21 09 2023
Ad