Bengaluru 21°C
Ad

ಗಣೇಶ ವಿಸರ್ಜನೆ ವೇಳೆ ಅನ್ಯಕೋಮಿಯರಿಂದ ಕಲ್ಲೆಸೆತ : ಹಿಂದೂಗಳ ಪ್ರತಿಭಟನೆ

ಗಣಪತಿ ವಿಸರ್ಜನೆ ವೇಳೆ ಅನ್ಯಕೋಮಿನ ಯುವಕರಿಂದ ಕಲ್ಲು ತೂರಾಟವಾಗಿದ್ದು, ಪೊಲೀಸ್ ಠಾಣೆ ಎದುರು ಗಣಪತಿ ಮೂರ್ತಿ ನಿಲ್ಲಿಸಿ ಹಿಂದೂಗಳ ಪ್ರತಿಭಟನೆ ನಡೆಸಿರುವ ಘಟನೆ ಮಂಡ್ಯದ ನಾಗಮಂಗಲದಲ್ಲಿ ನಡೆದಿದೆ. ನಾಗಮಂಗಲದ ಬದರಿಕೊಪ್ಪಲಿನಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಯನ್ನು ಇಂದು ಅದ್ದೂರಿಯಾಗಿ ವಿಸರ್ಜನೆ ಮಾಡಲಾಗ್ತಿತ್ತು.

ಮಂಡ್ಯ: ಗಣಪತಿ ವಿಸರ್ಜನೆ ವೇಳೆ ಅನ್ಯಕೋಮಿನ ಯುವಕರಿಂದ ಕಲ್ಲು ತೂರಾಟವಾಗಿದ್ದು, ಪೊಲೀಸ್ ಠಾಣೆ ಎದುರು ಗಣಪತಿ ಮೂರ್ತಿ ನಿಲ್ಲಿಸಿ ಹಿಂದೂಗಳ ಪ್ರತಿಭಟನೆ ನಡೆಸಿರುವ ಘಟನೆ ಮಂಡ್ಯದ ನಾಗಮಂಗಲದಲ್ಲಿ ನಡೆದಿದೆ. ನಾಗಮಂಗಲದ ಬದರಿಕೊಪ್ಪಲಿನಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಯನ್ನು ಇಂದು ಅದ್ದೂರಿಯಾಗಿ ವಿಸರ್ಜನೆ ಮಾಡಲಾಗ್ತಿತ್ತು.

ಈ ವೇಳೆ ಹಿಂದೂ-ಮುಸ್ಲಿಂ ಯುವಕರ ನಡುವೆ ವಾಕ್ಸಮರ, ತಳ್ಳಾಟ ನೂಕಾಟವಾಗಿದ್ದು, ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಹರಸಾಹಸ ನಡೆಸಿದ್ದಾರೆ. ಬಳಿಕ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕಾಗಿ ಆಗ್ರಹಿಸಿ ಪೊಲೀಸ್ ಠಾಣೆ ಎದುರು ಗಣೇಶ ಮೂರ್ತಿ ನಿಲ್ಲಿಸಿ ಹಿಂದೂಗಳು ಪ್ರತಿಭಟನೆ ನಡೆಸಿದ್ದಾರೆ. ಕಳೆದ ವರ್ಷವೂ ಇದೇ ದರ್ಗಾ ಮುಂಭಾಗ ಗಲಾಟೆ ನಡೆದಿತ್ತು. ಮೆರವಣಿಗೆ ವೇಳೆ ದರ್ಗಾ ಮುಂದೆ ತಮಟೆ, ಡೊಳ್ಳು ಬಾರಿಸದಂತೆ ಕಿರಿಕ್ ಆಗಿತ್ತು. ಈ ಬಾರಿ ಕಲ್ಲೆಸೆತ ನಡೆದಿದ್ದು, ನಾಗಮಂಗಲ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Ad
Ad
Nk Channel Final 21 09 2023