ಮಂಡ್ಯ: ಟೈರ್ ಪಂಚರ್ ಆಗಿ ರಸ್ತೆ ಪಕ್ಕದ ಜಮೀನಿಗೆ ಕೆ.ಎಸ್.ಆರ್.ಟಿ.ಸಿ. ಬಸ್ ನುಗ್ಗಿದ ಘಟನೆ ಮಂಡ್ಯದ ಪಾಂಡವಪುರ ತಾಲೂಕಿನ ನಲ್ಲಹಳ್ಳಿ ಬಳಿ ನಡೆದಿದೆ.

ಟೈರ್ ಪಂಚರ್ ಆದ ಕಾರಣ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಜಮೀನಿಗೆ ನುಗ್ಗಿದೆ. ಘಟನೆಯಲ್ಲಿ ಬಸ್ ನಲ್ಲಿದ್ದ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನ ಚಿಕಿತ್ಸೆಗಾಗಿ ಪಾಂಡವಪುರ ಪಟ್ಟಣದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಗಂಭೀರ ಗಾಯಗೊಂಡವರು ಮೈಸೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.