ಮಂಡ್ಯ: ಗಣಪತಿ ವಿಸರ್ಜನೆ ವೇಳೆ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆ ಬೇಲೂರು ಗ್ರಾಮದಲ್ಲಿ ನಡೆದಿದೆ. ಯರಹಳ್ಳಿ ಗ್ರಾಮದ ಪ್ರದೀಪ್( 28) ಮೃತ ಯುವಕ.

ರಾತ್ರಿ ಬೇಲೂರು ಕೆರೆಯಲ್ಲಿ ಗಣೇಶ ವಿಸರ್ಜನೆ ಮಾಡುವ ವೇಳೆ ಯುವಕರ ಜೊತೆ  ಪ್ರದೀಪ್‌ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಪ್ರದೀಪ್‌ ಮದ್ಯಪಾನ ಮಾಡಿ ನೀರಿಗಿಳಿದಿರುವ ಶಂಕ ವ್ಯಕ್ತವಾಗಿದೆ.

ಅಗ್ನಿಶಾಮಕ ಸಿಬ್ಬಂದಿಗಳು ಪ್ರದೀಪ್ ಮೃತ ದೇಹ ಹೊರ ತೆಗೆದಿದ್ದಾರೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.