ಮಂಡ್ಯ: ಮಂಡ್ಯದಲ್ಲಿ ಬೆಳ್ಳಂಬೆಳಗ್ಗೆಯೇ ದಾರುಣ ಘಟನೆಯೊಂದು ವರದಿಯಾಗಿದೆ. ಗಂಡನ ಮನೆಯಲ್ಲಿ ಗೃಹಿಣಿಯ ನೇಣು ಬಿಗಿದ ಸ್ಥಿತಿಯಲ್ಲಿ ಪತ್ನಿ ಶವ ಪತ್ತೆಯಾದರೆ, ಮತ್ತೊಂದೆಡೆ ಪತಿ ಕೆರೆಗೆ ಹಾರಿ ಪ್ರಾಣ ಬಿಟ್ಟಿದ್ದಾನೆ.ಈ ಅನುಮಾಸ್ಪದ ಸಾವು ಹಲವಾರು ಅನುಮಾನಗಳನ್ನು ಹುಟ್ಟುಹಾಕಿದೆ. ಇನ್ನು ಗಂಡನ ಮನೆಯ ಉಳಿದವರು ನಾಪತ್ತೆಯಾಗಿದ್ದು, ಗೃಹಿಣಿ ಸಾವಿನಿಂದ ಜನರಲ್ಲಿ ಹುಟ್ಟಿಕೊಂಡಿರುವ ಆಕ್ರೋಶದ ಪರಿಣಾಮ ತಲೆ ಮರೆಸಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.ಕೆ.ಆರ್.ಪೇಟೆ ತಾಲೂಕಿನ ಮಂದಗೆರೆ ಗ್ರಾಮದಲ್ಲಿ ಘಟನೆ ನಡೆದಿದೆ. ಸ್ವಾತಿ (21) ಅನುಮಾನಾಸ್ಪದವಾಗಿ ಮೃತಪಟ್ಟಿರುವ ಗೃಹಿಣಿ. ಮೋಹನ್ (26) ಆತ್ಮಹತ್ಯೆ ಮಾಡಿಕೊಂಡಿರುವ ಪತಿ.
ಕೊಲೆಗೈದು ಪರಾರಿಯಾಗಿದ್ದಾರೆ ಎಂದು ಮೃತ ಸ್ವಾತಿ ಪೋಷಕರು ಆರೋಪ ಮಾಡಿದ್ದರು. ಸ್ಥಳಕ್ಕೆ ಆಗಮಿಸಿದ ಕಿಕ್ಕೇರಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ನಾಪತ್ತೆಯಾಗಿರುವ ಗಂಡ ಹಾಗೂ ಅವನ ಮನೆಯವರಿಗಾಗಿ ಶೋಧ ಕಾರ್ಯ ನಡೆಸಿದ್ದರು. ಗ್ರಾಮದಲ್ಲಿ ಬಿಗುವಿನ ವಾತಾವರಣ, ಪೊಲೀಸ್ ಬಂದೋಬಸ್ತ್ ನೀಡಲಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಆದಿಚುಂಚನಗಿರಿ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ.

