Bengaluru 23°C
Ad

ಭೂಮಿಯನ್ನು ಉಳಿಸುವ ಕೆಲಸ ಮಾಡಬೇಕು: ಪಿಇಟಿ ನಿರ್ದೇಶಕ ಡಾ.ರಾಮಲಿಂಗಯ್ಯ

ಇನ್ನೂರು ಕೋಟಿಗಳ ವರ್ಷದ ಇತಿಹಾಸ ಇರುವ ಭೂಮಿಯನ್ನು ಭವಿಷ್ಯದ ದೃಷ್ಟಿಯಿಂದ ಉಳಿಸುವ ಕೆಲಸವನ್ನು ಮಾಡುವ ಅವಶ್ಯಕತೆಯಿದ್ದು, ವಿದ್ಯಾರ್ಥಿಗಳಿಗೆ ಭೂಮಿಯ ಬಗ್ಗೆ ತಿಳಿಸಿಕೊಡುವ ಕೆಲಸ ಮಾಡುವ ಅಗತ್ಯತೆ ಇದೆ ಎಂದು ಪಿಇಟಿ ನಿರ್ದೇಶಕ ಡಾ.ರಾಮಲಿಂಗಯ್ಯ ತಿಳಿಸಿದರು.

ಮಂಡ್ಯ: ಇನ್ನೂರು ಕೋಟಿಗಳ ವರ್ಷದ ಇತಿಹಾಸ ಇರುವ ಭೂಮಿಯನ್ನು ಭವಿಷ್ಯದ ದೃಷ್ಟಿಯಿಂದ ಉಳಿಸುವ ಕೆಲಸವನ್ನು ಮಾಡುವ ಅವಶ್ಯಕತೆಯಿದ್ದು, ವಿದ್ಯಾರ್ಥಿಗಳಿಗೆ ಭೂಮಿಯ ಬಗ್ಗೆ ತಿಳಿಸಿಕೊಡುವ ಕೆಲಸ ಮಾಡುವ ಅಗತ್ಯತೆ ಇದೆ ಎಂದು ಪಿಇಟಿ ನಿರ್ದೇಶಕ ಡಾ.ರಾಮಲಿಂಗಯ್ಯ ತಿಳಿಸಿದರು.

ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪರಿಸರ ರೂರಲ್ ಡೆವಲಪ್‌ಮೆಂಟ್ ಸೊಸೈಟಿ ವತಿಯಿಂದ ನಮ್ಮ ಭೂಮಿ ನಮ್ಮ ಭವಿಷ್ಯ ಎಂಬ ಘೋಷವಾಕ್ಯದಡಿ ವಿಶ್ವ ಪರಿಸರ ದಿನ-2024 ನಿಮಿತ್ತ ಮಂಡ್ಯ ನಗರದ ಜಿಲ್ಲಾಧಿಕಾರಿಗಳ ಕಛೇರಿಯ ಕಾವೇರಿ ಉದ್ಯಾನದಲ್ಲಿ ಮಾಧ್ಯಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಚಿತ್ರಕಲಾ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಅಭಿವೃದ್ಧಿ ಹೆಸರಲ್ಲಿ ಮರಗಳನ್ನು ಕಡಿಯುತ್ತಿರು ವುದರಿಂದ ಇತ್ತೀಚಿನ ವರುಷಗಳಲ್ಲಿ ಮಳೆಯ ಪ್ರಮಾಣ  ಕಡಿಮೆಯಾಗುತ್ತಿದೆ. ಆದ್ದರಿಂದ ಪ್ರತಿಯೊಬ್ಬರೂ ತಮ್ಮ ಮನೆಯಲ್ಲಿ ಗಿಡಗಳನ್ನು ನೆಟ್ಟು ಪೋಷಿಸುವುದರಿಂದ ಪರಿಸರ ಸಂರಕ್ಷಣೆ ಮಾಡಿದಂತಾಗುತ್ತದೆ ಎಂದು ಹೇಳಿದರು.

ಜಿಲ್ಲಾ ಪರಿಸರ ಅಧಿಕಾರಿ ಬಿ.ಪಿ. ಗೀತಾ ಮಾತನಾಡಿ ಹಸಿರು ನಾಡು ಎನ್ನುವ ಮಂಡ್ಯ ಜಿಲ್ಲೆಯಲ್ಲಿ ಈ ಬಾರಿಯ ಬೇಸಿಗೆ ಬಿಸಿಲು ಜನರಿಗೆ ಎಷ್ಟೊಂದು ಕಷ್ಟ ಕೊಟ್ಟಿದೆ ಎಂಬುದನ್ನು ಅರಿತು ಪರಿಸರ ಉಳಿವಿಗಾಗಿ ಜನರು ಗಿಡಮರಗಳನ್ನು ಬೆಳೆಸಿ ಎಂದು ತಿಳಿಸಿದರಲ್ಲದೆ, ಮಾನವನ ದುರಾಸೆಯಿಂದ ಪರಿಸರವನ್ನು ಹಾಳು ಮಾಡುತ್ತಿದ್ದಾನೆ.ಮುಂದಿನ ಪೀಳಿಗೆಗೆ ಪರಿಸರದ ಉಳಿಸಲು ಇಂತಹ ಚಿತ್ರಕಲಾ ಸ್ಪರ್ಧೆಗಳನ್ನು ವಿದ್ಯಾರ್ಥಿಗಳಿಗೆ ಏರ್ಪಡಿಸಿ ಅರಿವು ಮೂಡಿಸಲಾಗುತ್ತಿದೆ. 1972 ರಿಂದ ವಿಶ್ವ ಪರಿಸರ  ದಿನಾಚರಣೆಯನ್ನು ಆಚರಿಸಿಕೊಂಡು ಬರಲಾಗುತ್ತಿದ್ದು ಈ ಬಾರಿ ನಮ್ಮ ಭೂಮಿ ನಮ್ಮ ಭವಿಷ್ಯ ಎಂಬ ಘೋಷವಾಕ್ಯದಡಿ ವಿಶ್ವ ಪರಿಸರ ದಿನ ಆಚರಿಸಲಾಗುತ್ತಿದೆ ಎಂದರು.

ಪರಿಸರ ಸಂಸ್ಥೆಯ ಅಧ್ಯಕ್ಷ ಮಂಗಲ ಎಂ.ಯೋಗೀಶ್ ಮಾತನಾಡಿ ರಚನಾತ್ಮಕವಾಗಿ ಪರಿಸರಸ್ನೇಹಿ ಚಟುವಟಿಕೆಗಳನ್ನು ಯುವ ಜನತೆಯಲ್ಲಿ ಹಮ್ಮಿಕೊಳ್ಳುವ ಮೂಲಕ ಕಾರ್ಯಕ್ರಮ ರೂಪಿಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣ ಕುರಿತು ಚಿತ್ರಕಲಾ ಸ್ಪರ್ಧೆ ಏರ್ಪಡಿಸಿರುವುದರಿಂದ ಮಕ್ಕಳಲ್ಲಿ ಪರಿಸರದ ಬಗ್ಗೆ ಅರಿವು ಮೂಡುತ್ತದೆ. ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮಂಡ್ಯದಲ್ಲಿ ಸೈಕಲ್ ಜಾಥಾ ಹಮ್ಮಿಕೊಳ್ಳುವ ಮೂಲಕ ಮಿಮ್ಸ್ ಆಸ್ಪತ್ರೆಯ ರೋಗಿಗಳಿಗೆ ಪರಿಸರಸ್ನೇಹಿ ಬಟ್ಟೆ ಬ್ಯಾಗ್ ಗಳನ್ನು ವಿತರಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಉಪ ಪರಿಸರ ಅಧಿಕಾರಿಗಳಾದ ಅಶ್ವಿನಿ, ಭವ್ಯ, ಗಾಯಕ ಸಂತೆಕಸಲಗೆರೆ ಬಸವರಾಜ್ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Ad
Ad
Nk Channel Final 21 09 2023
Ad