Bengaluru 22°C
Ad

10 ಕೋಟಿ ರೂ. ವೆಚ್ಚದಲ್ಲಿ ವೆನ್‌ಲಾಕ್ ಆಸ್ಪತ್ರೆ ನವೀಕರಣ: ದಿನೇಶ್ ಗುಂಡೂರಾವ್

ವೆನ್‌ಲಾಕ್‌ನಲ್ಲಿ ಅಗತ್ಯ ಹೊಸ ಕಟ್ಟಡಗಳೊಂದಿಗೆ ಅಂದಾಜು 10 ಕೋಟಿ ರೂ. ವೆಚ್ಚದಲ್ಲಿ ನವೀಕರಣ ಕಾಮಗಾರಿಯನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳುವ ಬಗ್ಗೆ ಜನವರಿಯೊಳಗೆ ಅಂತಿಮ ತೀರ್ಮಾನ ಮಾಡಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಮಂಗಳೂರು : ವೆನ್‌ಲಾಕ್‌ನಲ್ಲಿ ಅಗತ್ಯ ಹೊಸ ಕಟ್ಟಡಗಳೊಂದಿಗೆ ಅಂದಾಜು 10 ಕೋಟಿ ರೂ. ವೆಚ್ಚದಲ್ಲಿ ನವೀಕರಣ ಕಾಮಗಾರಿಯನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳುವ ಬಗ್ಗೆ ಜನವರಿಯೊಳಗೆ ಅಂತಿಮ ತೀರ್ಮಾನ ಮಾಡಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

Ad

ಶನಿವಾರ ಲೇಡಿಗೋಶನ್ ಆಸ್ಪತ್ರೆಯ ವಿನೂತನ ಸೌಲಭ್ಯಗಳನ್ನು ವೀಕ್ಷಿಸಿದ ಬಳಿಕ ವೆನ್‌ಲಾಕ್ ಆಸ್ಪತ್ರೆ ಸೇರಿದಂತೆ ಪ್ರಗತಿ ಪರಿಶೀಲನೆ ನಡೆಸಿದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

Ad

ವೆನ್‌ಲಾಕ್ ಆಸ್ಪತ್ರೆಯ ಶವಾಗಾರ ಕಟ್ಟಡ, ಪ್ಯಾರಾ ಮೆಡಿಕಲ್ ಕಾಲೇಜು ಕಟ್ಟಡ, ಪೋಸ್ಟ್ ಮಾರ್ಟಂ ಕೊಠಡಿ ನಿರ್ಮಾಣ, ಅಡುಗೆ ಕೋಣೆ ನಿರ್ಮಾಣ, ಎರಡು ಕಟ್ಟಡಗಳನ್ನು ಸಂಪರ್ಕಿಸುವ ಸೇತುವೆಯ ಪುನರ್ ನಿರ್ಮಾಣ ಸೇರಿದಂತೆ ಅಂದಾಜು ಮೂಲ ಕಾಮಗಾರಿಗಳಿಗೆ ವಿವಿಧ ಸಂಸ್ಥೆಗಳ ಸಿಎಸ್‌ಆರ್ ಫಂಡ್‌ನಿಂದ ಪಡೆಯುವ ಜತೆಗೆ ಇಲಾಖೆಯಿಂದಲೂ ಅನುದಾನ ಒದಗಿಸಿ ಕ್ರಮ ವಹಿಸಲಾಗುವುದು.

Ad

ರಾಜ್ಯದಲ್ಲಿ ಡೇ ಕೇರ್ ಕಿಮೋ ತೆರಪಿ ಸೆಂಟರ್ ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ತೆರೆಯಲಾಗುತ್ತಿದ್ದು ವೆನ್‌ಲಾಕ್ ಆಸ್ಪತ್ರೆ ಯಲ್ಲೂ ಈ ಸೌಲಭ್ಯ ಲಭ್ಯವಾಗಲಿದೆ. ಈ ಸೆಂಟರ್‌ನಲ್ಲಿ ಬೆಳಗ್ಗಿನಿಂದ ಸಂಜೆಯ ಅವಧಿಯಲ್ಲಿ ಕಿಮೋತೆರಪಿ ಸೌಲಭ್ಯ ಪಡೆ ಯುವ ನಿಟ್ಟಿನಲ್ಲಿ 10 ಬೆಡ್ ಸೌಲಭ್ಯಗಳ ಕೇಂದ್ರ ಆರಂಭಗೊಳ್ಳಲಿದೆ.

Ad

ಜಿಲ್ಲಾಸ್ಪತ್ರೆಗಳಲ್ಲಿ ಅಂಕಾಲಜಿಸ್ಟ್‌ಗಳು ಇಲ್ಲದ ಕಾರಣ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಕಾರವನ್ನು ಪಡೆಯಲಾಗುತ್ತಿದ್ದು ವೆನ್‌ಲಾಕ್‌ನಲ್ಲಿ ಯೇನೆಪೋಯ ಆಸ್ಪತ್ರೆಯ ಸಹಯೋಗದೊಂದಿಗೆ ಸೆಂಟರ್ ಕಾರ್ಯಾಚರಿಸಲಿದೆ. ಈ ಬಗ್ಗೆ ಸಿದ್ಧತೆ ನಡೆದಿದ್ದು, ಡಿಸೆಂಬರ್‌ನಲ್ಲಿ ಮುಖ್ಯಮಂತ್ರಿಯವರು ಈ ಸೌಲಭ್ಯವನ್ನು ರಾಜ್ಯವ್ಯಾಪಿಯಾಗಿ ಉದ್ಘಾಟಿಸಲಿದ್ದಾರೆ ಎಂದವರು ಹೇಳಿದರು.

Ad

ಶಿಥಿಲಗೊಂಡಿರುವ ಅಡ್ಡರು- ಪೊಳಲಿ ಸೇತುವೆಯನ್ನು 6.10 ಕೋಟಿ ರೂ. ಹಾಗೂ ಉಳಾಯಿಬೆಟ್ಟು ಸೇತುವೆಯನ್ನು 5 ಕೋಟಿ ರೂ. ದುರಸ್ತಿಗೊಳಿಸುವ ಬಗ್ಗೆ ಅಂದಾಜು ಪಟ್ಟಿ ತಯಾರಿಸಲಾಗಿದೆ. ಈ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿಯವರ ಜತೆಗೂ ಚರ್ಚಿಸಲಾಗಿದ್ದು, ಬೆಂಗಳೂರಿನಲ್ಲಿ ಈ ಬಗ್ಗೆ ಚರ್ಚಿಸಿ ಶಾರ್ಟ್‌ಟರ್ಮ್ ಟೆಂಡರ್ ಮೂಲಕ ದುರಸ್ತಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು. ಪೊಳಲಿಯಲ್ಲಿ ಹೊಸ ಸೇತುವೆ ನಿರ್ಮಾಣ ಮಾಡಲು ಸುಮಾರು 60 ಕೋಟಿರೂ. ಅಗತ್ಯ ವಿದ್ದು, ಇದಕ್ಕೂ ಮುಂದಿನ ದಿನಗಳಲ್ಲಿ ಕ್ರಮ ವಹಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

Ad
Ad
Ad
Nk Channel Final 21 09 2023