Bengaluru 28°C

ಮಂಗಳೂರು ಹೋಂ ಸ್ಟೇ ದಾಳಿ ಪ್ರಕರಣ : 40 ಆರೋಪಿಗಳು ಖುಲಾಸೆ

ಮಂಗಳೂರಿನಲ್ಲಿ ಹನ್ನೆರಡು ವರ್ಷಗಳ ಹಿಂದೆ ನಡೆದಿದ್ದ ಹೋಂ ಸ್ಟೇ ದಾಳಿ ಪ್ರಕರಣದ ಎಲ್ಲಾ ಆರೋಪಿಗಳು ಖುಲಾಸೆಗೊಂಡಿದ್ದಾರೆ.  ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಗಳವಾರ (ಆ.06) ತೀರ್ಪು ನೀಡಿದೆ.

ಮಂಗಳೂರು: ಮಂಗಳೂರಿನಲ್ಲಿ ಹನ್ನೆರಡು ವರ್ಷಗಳ ಹಿಂದೆ ನಡೆದಿದ್ದ ಹೋಂ ಸ್ಟೇ ದಾಳಿ ಪ್ರಕರಣದ ಎಲ್ಲಾ ಆರೋಪಿಗಳು ಖುಲಾಸೆಗೊಂಡಿದ್ದಾರೆ.  ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಗಳವಾರ (ಆ.06) ತೀರ್ಪು ನೀಡಿದೆ.


ಪ್ರಕರಣದ ಬಗ್ಗೆ ಸಾಕ್ಷ್ಯಾಧಾರಗಳ ಕೊರತೆಯಿಂದ ಆರೋಪಿಗಳು ದೋಷ ಮುಕ್ತರಾಗಿದ್ದಾರೆ ಎಂದು ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ತ ನ್ಯಾಯಾಲಯದ ನ್ಯಾಯಾಧೀಶರಾದ ಕಾಂತರಾಜು ತೀರ್ಪು ನೀಡಿದ್ದಾರೆ.2012ರ ಜುಲೈ 28ರಂದು ಮಂಗಳೂರಿನ ಪಡೀಲ್ ಬಳಿಯ ಮಾರ್ನಿಂಗ್ ಮಿಸ್ಟ್ ಹೋಂ ಸ್ಟೇ ಮೇಲೆ ದಾಳಿ ನಡೆದಿತ್ತು. ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಈ ದಾಳಿ ನಡೆಸಿದ್ದರು ಎಂದು ಅಪಾದಿಸಲಾಗಿತ್ತು. ಬರ್ತ್ ಡೇ ಪಾರ್ಟಿಯಲ್ಲಿ ನಿರತರಾಗಿದ್ದ ಯುವಕ-ಯುವತಿಯರ ಮೇಲೂ ತಂಡ ದಾಳಿ ಮಾಡಿತ್ತು ಎಂದು ಮಂಗಳೂರು ಗ್ರಾಮಾಂತರ ಪೊಲೀಸರು 44 ಆರೋಪಿಗಳ ವಿರುದ್ದ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿತ್ತು. ಒಟ್ಟು 44 ಆರೋಪಿಗಳ ಪೈಕಿ ಮೂವರು ಸಾವನ್ನಪ್ಪಿದ್ದರು. ಓರ್ವನ ಮೇಲಿನ ಪ್ರಕರಣ ಕೈಬಿಡಲಾಗಿತ್ತು.

 

Nk Channel Final 21 09 2023