ಮಂಗಳೂರು : ಕದ್ರಿ ಪೊಲೀಸ್ ಠಾಣೆ ಮುಂಭಾಗ ಯುದ್ದ ಸ್ಮಾರಕದ ಬಳಿ ನಿಲ್ಲಿಸಿದ್ದ ಕಾರೊಂದು ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಕಾರನ್ನು ಸ್ಮಾರಕದ ಸಮೀಪ ಪಾರ್ಕ್ ಮಾಡಲಾಗಿದ್ದು, ಇದ್ದಕ್ಕಿದ್ದ ಹಾಗೆ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ಕಾರಿನಲ್ಲಿ ಯಾರೂ ಇರಲಿಲ್ಲ.
Ad
ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಅಗ್ನಿಶಾಮಕದಳ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.
Ad
Ad