ಮಂಗಳೂರು: ಭಾರೀ ಮಳೆಯಿಂದ ಕರ್ನಾಟಕದಲ್ಲಿ ಅವಾಂತರಗಳು ಸೃಷ್ಟಿಯಾಗಿದೆ. ನದಿಯಲ್ಲಿ ಜೀವಂತ ಹಸುವೊಂದು ಸಿಕ್ಕಿಹಾಕಿಕೊಂಡಿದ್ದು, ಕ್ಷಿಪ್ರ ಕಾರ್ಯಾಚರಣೆ ನಡೆಸಿ ಹೋಂ ಗಾರ್ಡ್ಸ್ ಹಸುವನ್ನು ಕಾಪಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಬಳಿಯ ನೇತ್ರಾವತಿ ನದಿಯಲ್ಲಿ ನಡೆದಿದೆ.
ನದಿಯಲ್ಲಿ ಹಸು ಕೊಚ್ಚಿಕೊಂಡು ಹೋಗುತ್ತಿದ್ದ ಬಗ್ಗೆ ಸ್ಥಳೀಯರಿಂದ ಮಾಹಿತಿ ನೀಡಲಾಗಿದ್ದು, ತಕ್ಷಣ ಧಾವಿಸಿದ ಉಪ್ಪಿನಂಗಡಿ ಗೃಹರಕ್ಷಕ ಪ್ರವಾಹ ರಕ್ಷಣಾ ತಂಡ ದೋಣಿಯಲ್ಲಿ ಹೋಗಿ ಹಗ್ಗ ಹಾಕಿ ಹಸು ರಕ್ಷಣೆ ಮಾಡಿದ್ದಾರೆ.

