ಮಂಗಳೂರು: ಉಳ್ಳಾಲದ ಸಜೀಪ ಪಡು ತಲೆಮೊಗರು ಮಸೀದಿ ಬಳಿ ಇತ್ತಂಡಗಳ ನಡುವೆ ಮಾರಾಮಾರಿ ನಡೆದಿದೆ.
ತಲವಾರು, ದೊಣ್ಣೆ, ಕಬ್ಬಿಣದ ರಾಡ್ ಬಳಸಿ ಹಲ್ಲೆ ಮಾಡಲಾಗಿದೆ. ಮಸೀದಿ ವಿಚಾರದಲ್ಲಿ ತಕರಾರು ಎದ್ದಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೂರು ಪ್ರಕರಣ ದಾಖಲಾಗಿದೆ.
ದೂರು-ಪ್ರತಿದೂರು ಸೇರಿ 3 ಪ್ರಕರಣಗಳು ದಾಖಲು ಮಾಡಲಾಗಿದೆ. ಹಲ್ಲೆಯಿಂದ ಗಾಯಗೊಂಡವರಿಗೆ ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ BNS ಮತ್ತು Arms Act ಅಡಿ ಪ್ರಕರಣ ದಾಖಲಾಗಿದೆ.

