ಮಂಗಳೂರು: ಮಂಗಳೂರಿನ ನಂದಿಗುಡ್ಡ ಕೊರಗಜ್ಜ ಸಾನಿಧ್ಯದಲ್ಲಿ ಅದ್ದೂರಿ ಕೋಲ ನಡೆಯಿತು. ಕನ್ನಡ ಚಿತ್ರರಂಗದ ಹೆಸರಾಂತ ಕಲಾವಿದರಾದ  ಶ್ರುತಿ,ಭವ್ಯ,ಜೈಜಗದೀಶ್, ವಿಜಯಲಕ್ಷ್ಮಿ ಸಿಂಗ್, ಭಾಗಿಯಾದರು.

ಅಜ್ಜನ ಕೋಲ ಸೇವೆಯನ್ನು ಸುಮಾರು1500 ಸಾವಿರಕ್ಕೂ ಅಧಿಕ ಮಂದಿ ಭಕ್ತರು ಕಣ್ತುಂಬಿಕೊಂಡರು. ಕೊರಗಜ್ಜ ಚಿತ್ರದ ಯಶಸ್ಸಿಗಾಗಿ ಚಿತ್ರ ತಂಡ ಹರಕೆ ಹೇಳಿದ್ದರು. 6 ಭಾಷೆಗಳಲ್ಲಿ ಬಿಡುಗಡೆಗೆ ಬಹುನಿರೀಕ್ಷಿತ ‘ಕೊರಗಜ್ಜ’ ಸಿನಿಮಾ ಸಿದ್ಧವಾಯ್ತು.

‘ಕೊರಗಜ್ಜ’ ಸಿನಿಮಾದಲ್ಲಿ ಶ್ರುತಿ, ಭವ್ಯ, ಕಬೀರ್ ಬೇಡಿ ಮುಂತಾದ ಕಲಾವಿದರು ಅಭಿನಯಿಸಿದ್ದಾರೆ. ಸುಧೀರ್ ಅತ್ತಾವರ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ತ್ರಿವಿಕ್ರಮ ಸಪಲ್ಯ  ನಿರ್ಮಾಣದ ‘ಸಕ್ಸಸ್ ಫಿಲ್ಮ್ಸ್’ ಹಾಗೂ ‘ತ್ರಿವಿಕ್ರಮ ಸಿನಿಮಾಸ್’ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ.

ನಿರ್ಮಾಪಕ ತ್ರಿವಿಕ್ರಮ ಸಪಲ್ಯ ಹಾಗೂ ಕಾರ್ಯಕಾರಿ ನಿರ್ಮಾಪಕ ವಿದ್ಯಾಧರ್ ಶೆಟ್ಟಿ ಕೆಲಸ ಮಾಡಿದ್ದಾರೆ.  ತುಳು, ಕನ್ನಡ, ಹಿಂದಿ, ತಮಿಳು, ತೆಲುಗು, ಮಲಯಾಳಂ ಸೇರಿದಂತೆ ಒಟ್ಟು 6 ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆಗೊಳ್ಳಲಿದೆ. ಕೊರಗಜ್ಜ ಸಿನಿಮಾ 3 ವರ್ಷಗಳ ಹಿಂದೆ ಸೆಟ್ಟೇರಿತ್ತು. ಈಗ ಬಿಡುಗಡೆಯ ಹಂತಕ್ಕೆ ಬಂದಿದೆ.