ಮಂಗಳೂರು: ಚಲಿಸುತ್ತಿದ್ದ ಬೈಕ್ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಕೆಬ ತಾಲೂಕಿನ ಕೋಡಿಂಬಾಳ ಸಮೀಪದ ಪುಳಿಕುಕ್ಕು ಎಂಬಲ್ಲಿ ನಡೆದಿದೆ.
Ad
ಸೀತಾರಾಮ(58) ಮೃತ ಬೈಕ್ ಸವಾರ. ಕಡಬದಿಂದ ಮನೆಗೆ ಬರುತ್ತಿರುವಾಗ ಘಟನೆ ನಡೆದಿದ್ದು, ಮನೆಯಲ್ಲಿ ಹರಕೆಗಾಗಿ ಕೋಳಿ ತರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಈ ಸಂದರ್ಭ ಏಕಾಏಕಿ ಬೃಹತ್ ಗಾತ್ರದ ಮರ ರಸ್ತೆಗೆ ಬಿದ್ದಿದೆ. ಅರಣ್ಯ ಇಲಾಖೆಯ ಅಸಡ್ಡೆ ವಿರುದ್ಧ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಕಡಬ ಪೊಲೀಸರ ಆಗಮಿಸಿ ಪ್ರಕರಣ ದಾಖಲಿಸಿದ್ದಾರೆ.
Ad
Ad