ಪುತ್ತೂರು: ಕಬಕ ಪುತ್ತೂರು ರೈಲ್ವೇ ನಿಲ್ದಾಣ ಸಮೀಪದ ಮುರ ಎಂಬಲ್ಲಿ ರೈಲು ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಜೂನ್‌ ೦1 ರಂದು ಬೆಳಕಿಗೆ ಬಂದಿದೆ.

ಮುರದಲ್ಲಿ ರೈಲು ಹಳಿ ದಾಟುವ ವೇಳೆ ರೈಲು ಡಿಕ್ಕಿ ಹೊಡೆದಿರಬಹುದು ಎಂದು ಶಂಕಿಸಲಾಗಿದ್ದು, ಸ್ಥಳಕ್ಕೆ ರೈಲ್ವೇ ಪೊಲೀಸರು ಆಗಮಿಸಿ ಮಾಹಿತಿ ಕಲೆ ಹಾಕಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ. ಮೃತಪಟ್ಟ ವ್ಯಕ್ತಿಯ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ. ರಾತ್ರಿ ವೇಳೆ ಈ ಘಟನೆ ನಡೆದಿರಬಹುದು ಎಂದು  ಶಂಕಿಸಲಾಗಿದೆ.