ಪುತ್ತೂರು: ಬೈಕ್ ಮತ್ತು ಕಾರು ನಡುವೆ ಅಪಘಾತ ನಡೆದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಂಬಳಬೆಟ್ಟು ಎಂಬಲ್ಲಿ ನಡೆದಿದೆ. ಭೀಕರ ಅಪಘಾತದ ದೃಶ್ಯ ಸಿ.ಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
Ad
ಘಟನೆಯಲ್ಲಿ ಬೈಕ್ ಸವಾರನಿಗೆ ಗಾಯವಾಗಿದ್ದು, ಒಳ ರಸ್ತೆಯಿಂದ ಮುಖ್ಯ ರಸ್ತೆಗೆ ಬೈಕ್ ಬರುತ್ತಿದ್ದು, ಈ ವೇಳೆ ಬೈಕ್ ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಕಾರು ಚಾಲಕ ಮುಂದಾಗಿದ್ದು, ಆದ್ರೆ ನಿಯಂತ್ರಣ ಕಳೆದುಕೊಂಡು ಬೈಕ್ ಗೆ ಕಾರು ಡಿಕ್ಕಿಯಾಗಿದೆ.
Ad
ಮತ್ತೊಂದು ಭಾಗದಲ್ಲಿ ನಿಲ್ಲಿಸಿದ್ದ ಮತ್ತೊಂದು ಬೈಕ್ ಗೂ ಕಾರು ಡಿಕ್ಕಿಯಾಗಿದೆ. ಬಳಿಕ ಮಣ್ಣಿನ ದಿಬ್ಬದ ಮೇಲೆ ಕಾರು ಮಗುಚಿ ಬಿದ್ದಿದೆ. ಘಟನೆಯಲ್ಲಿ ಪವಾಡ ಸದೃಶವಾಗಿ ಕಾರು ಸನನ್ ಚಾಲಕ ಪಾರಾಗಿದ್ದಾರೆ. ಬೈಕ್ ಸವಾರ ಯತೀಶ ಪುತ್ತೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ.
Ad
Ad