ಮಂಗಳೂರು: ಕೆಎಸ್ ಆರ್ ಟಿಸಿ ಬಸ್ ಗೆ ಆಕಸ್ಮಿಕ ಬೆಂಕಿ ತಗುಲಿದ ಘಟನೆ ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಎರ್ಮೈಲ್ ಬಳಿ ನಡೆದಿದೆ. ಚಾಲಕನ ಸಮಯ ಪ್ರಜ್ಞೆಯಿಂದ 37 ಪ್ರಯಾಣಿಕರು ಸುರಕ್ಷಿತವಾಗಿ ಪಾರಾದರು.

ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ಕೆಎಸ್ಆರ್ ಟಿಸಿ ಬಸ್ ತೆರಳುತ್ತಿತ್ತು. ಎರ್ಮೈಲ್ ಎಂಬಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿ ಬಸ್ ಸಂಪೂರ್ಣ ಉರಿದು ಹೋಗಿದೆ. ತಕ್ಷಣ ಎಲ್ಲಾ 37 ಪ್ರಯಾಣಿಕರನ್ನ ಬಸ್ಸಿನಿಂದ ಚಾಲಕ,ನಿರ್ವಾಹಕ ಇಳಿಸಿದ್ದಾರೆ. ಬಸ್ಸಿನಲ್ಲಿದ್ದ ಎಲ್ಲಾ 37 ಮಂದಿ ಪ್ರಯಾಣಿಕರು ಸುರಕ್ಷಿತವಾಗಿ ಪಾರಾಗಿದ್ದಾರೆ.

View this post on Instagram

A post shared by News Karnataka (@newskarnataka)