ಮಂಗಳೂರು : ಅಕ್ರಮ ಮರಳು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು ಎರಡು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಹಾಸನದಲ್ಲಿ ಪತ್ತೆಹಚ್ಚಿದ್ದಾರೆ.
ಉಪ್ಪಿನಂಗಡಿ ಠಾಣಾ ಪಿ.ಸಿ.ಆರ್. ಸಂಖ್ಯೆ 01/18ರ ಪ್ರಕರಣದಲ್ಲಿ ಆರೋಪಿಯಾಗಿದ್ದ ಹಾಸನ ಜಿಲ್ಲೆಯ ಬೇಲೂರು ನಿವಾಸಿ ವಿಶ್ವ ಎಂಬಾತನನ್ನು ಅಕ್ಟೋಬರ್ 6ರಂದು ಪೊಲೀಸರು ಪತ್ತೆ ಮಾಡಿದ್ದಾರೆ.
ಉಪ್ಪಿನಂಗಡಿ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಪಿಸಿ 2295 ಪ್ರವೀಣ್ ಹಾಗೂ ಪಿಸಿ ಲಿಂಗರಾಜು ಅವರು ಹಾಸನದಲ್ಲಿ ಆರೋಪಿಯನ್ನು ಪತ್ತೆಹಚ್ಚಿ, ಬಳಿಕ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

