ಮಂಗಳೂರು: ಉರ್ವ ಸ್ಟೋರ್‌ನಲ್ಲಿರುವ ತುಳು ಭವನದಲ್ಲಿ ತುಳುನಾಡ ರಕ್ಷಣಾ ವೇದಿಕೆ ಹಾಗೂ ತುಳುನಾಡ ಸೂರ್ಯ ಪತ್ರಿಕೆಯ ವತಿಯಿಂದ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಪ್ರಶಸ್ತಿ ಪ್ರದಾನ ಸಮಾರಂಭ ಅದ್ದೂರಿಯಾಗಿ ನಡೆಯಿತು.

ಸಹಕಾರಿ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ತೌಳವ ಸಹಕಾರಿ ಮಾಣಿಕ್ಯ, ತೌಳವ ಸಹಕಾರಿ ರತ್ನ, ತೌಳವ ಸಹಕಾರಿ ಸಿರಿ ಹಾಗೂ ತೌಳವ ಸಹಕಾರಿ ಸಾಧಕ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು. ಇದರೊಂದಿಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೂ ಸನ್ಮಾನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಮೂಡುಬಿದಿರೆಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ, ಡಿ.ಕೆ. ಬಿಸಿಸೆಸ್ ಅಂಡ್ ಟೆಕ್ನಾಲಜಿ ಅಡ್ವೈಸರ್ ಪ್ರೈವೇಟ್ ಲಿಮಿಟೆಡ್‌ನ ಮ್ಯಾನೇಜಿಂಗ್ ಡೈರೆಕ್ಟರ್ ಅಲ್ವಿನ್ ಜೋಯಲ್ ನೊರೊನ್ಹ ಹಾಗೂ ಯೋಗೀಶ್ ಶೆಟ್ಟಿ ಜೆಪ್ಪು ಸೇರಿದಂತೆ ಹಲವು ಗಣ್ಯರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಹಲವು ಗಣ್ಯರು ಉಪಸ್ಥಿತರಿದ್ದು, ಸಹಕಾರಿ ಕ್ಷೇತ್ರದ ಸಾಧಕರ ಸೇವೆಯನ್ನು ಶ್ಲಾಘಿಸಿದರು.