ಮಂಗಳೂರು: ರಾಜ್ಯದ ಇತಿಹಾಸ ಪ್ರಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆದಾಯದಲ್ಲಿ ಭಾರೀ ಏರಿಕೆಯಾಗಿದೆ. 2024-25ನೇ ಸಾಲಿನ ವಾರ್ಷಿಕ ಆದಾಯ 155.95 ಕೋಟಿ ರೂ. ಏರಿಕೆ ಆಗಿದೆ.
ಕಳೆದ ವರ್ಷ ವಾರ್ಷಿಕ ಆದಾಯ 146.01 ಕೋಟಿ ರೂ. ಆಗಿತ್ತು. ಅಂದರೆ ಕಳೆದ ವರ್ಷಕ್ಕಿಂತ ಈ ಬಾರಿ 9.94 ಕೋಟಿ ರೂ. ಆದಾಯ ಏರಿಕೆ ಆಗಿದೆ. ಆ ಮೂಲಕ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಮತ್ತೆ ರಾಜ್ಯದ ಶ್ರೀಮಂತ ದೇವಸ್ಥಾನ ಎಂಬ ಹೆಗ್ಗಳಿಕೆ ಪಡೆದುಕೊಂಡಿದೆ.
ಕಳೆದ ವರ್ಷವೂ ಪ್ರಥಮ ಸ್ಥಾನದಲ್ಲಿತ್ತು. ಈ ಭಾರಿ ಕೂಡ ವಾರ್ಷಿಕ ಆದಾಯದಲ್ಲಿ ಏರಿಕೆಯಿಂದಾಗಿ ಮತ್ತೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ತನ್ನ ಪ್ರಥಮ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಅತೀ ಹೆಚ್ಚು ಆದಾಯಗಳಿಸುವ ದೇವಾಲಯಗಳ ಪಟ್ಟಿಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ಪ್ರಥಮ ಸ್ಥಾನದಲ್ಲಿದೆ.

