ಮಂಗಳೂರು: ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆ ಕಣಿಯ ಮನೆಯೊಂದರಲ್ಲಿ ಸೋಮವಾರ ರಾತ್ರಿ ಕಳವು ನಡೆದಿದೆ. ಮನೆಮಂದಿ ಮಲಗಿದ್ದಾಗ ಕಿಟಕಿ ಮುರಿದು ಚಿನ್ನಾಭರಣ ಕಳವು ಮಾಡಲಾಗಿದೆ. ಅಲ್ಲದೆ ಕಳ್ಳರು ಕಾರನ್ನು ಕೂಡ ಕಳವು ಮಾಡಿದ್ದಾರೆಂದು ತಿಳಿದುಬಂದಿದೆ.
ಕಳೆದ ಶನಿವಾರ ನಗರದ ಕೋಡಿಕಲ್ ಬಳಿ ಕಳ್ಳತನ ನಡೆದಿತ್ತು. ಚಡ್ಡಿಗ್ಯಾಂಗ್ ಆ ಕೃತ್ಯ ನಡೆಸಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದರು.ಅದೇ ತಂಡ ಕೋಟೆಕಣಿಯಲ್ಲಿಯೂ ಕೃತ್ಯ ಎಸಗಿದೆ ಎಂದು ಅಂದಾಜಿಸಲಾಗಿದೆ.
ಕೋಟೆಕಣಿಯಲ್ಲಿ ತಡರಾತ್ರಿ ನಾಲ್ವರು ಕಳ್ಳರು ವೃದ್ದ ದಂಪತಿಗೆ ಹಲ್ಲೆ ನಡೆಸಿ ಚಿನ್ನಾಭರಣ, ಮೊಬೈಲ್ ಜತೆಗೆ ಕಾರನ್ನು ಕೊಂಡೊಯ್ದು ಹೆಜಮಾಡಿ ಬಳಿ ಕಾರನ್ನು ಬಿಟ್ಟು ಹೋಗಿದ್ದಾರೆ. ಕಾರಿನ ಕೀಯನ್ನು ಕೂಡ ಮನೆಯವರಿಂದಲೇ ಪಡೆದುಕೊಂಡಿದ್ದರು ಎಂದು ತಿಳಿದು ಬಂದಿದೆ.

