ಮಂಗಳೂರು : ಮುಲ್ಕಿ ತಾಲೂಕು ಕಾರ್ನಾಡು ಗ್ರಾಮದ ಲಿಂಗಪ್ಪಯ್ಯಕಾಡು ಬಿಜಾಪುರ ಕಾಲನಿ ಎಂಬಲ್ಲಿನ ಮುಸ್ಕಾನ್ (24) ಎಂಬವರು ಎಪ್ರಿಲ್ 8 ರಂದು ಕಾಣೆಯಾಗಿದ್ದು, ಈ ಬಗ್ಗೆ ಮುಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಕಾಣೆಯಾದವರ ಚಹರೆ: ಎತ್ತರ 5 ಅಡಿ, ದುಂಡು ಮುಖ, ಕಪ್ಪು ಉದ್ದ ತಲೆ ಕೂದಲು, ಕುತ್ತಿಗೆಯಲ್ಲಿ ಕಪ್ಪು ಎಳ್ಳು ಮಚ್ಚೆ ಇರುತ್ತದೆ. ಕನ್ನಡ ಮತ್ತು ಹಿಂದಿ ಭಾಷೆ ಮಾತನಾಡುತ್ತಾರೆ. ಕಾಣೆಯಾದ ದಿನ ನೀಲಿ ಬಣ್ಣದ ಚೂಡಿದಾರ ಧರಿಸಿದ್ದರು. ಕಾಣೆಯಾದವರ ಬಗ್ಗೆ ಮಾಹಿತಿ ಪತ್ತೆಯಾದಲ್ಲಿ ಮುಲ್ಕಿ ಪೋಲಿಸ್ ಠಾಣೆ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.