ಮಂಗಳೂರು: ನಗರದ ಕಂಕನಾಡಿ ಜೆಪ್ಪು ಕುಡ್ಪಾಡಿ ನಿವಾಸಿ ಚಂದ್ರಹಾಸ (50) ಎಂಬವರು ಲಾರಿ ಮೆಕ್ಯಾನಿಕ್/ ಕಂಡಕ್ಟರ್ ವೃತ್ತಿ ಮಾಡಿಕೊಂಡಿದ್ದು, ಕೆಲಸಕ್ಕೆ ಹೋದರೆ 3 ತಿಂಗಳಿಗೊಮ್ಮೆ ಮನೆಗೆ ಬರುತ್ತಿದ್ದರು.
ಆಗಸ್ಟ್ 13 ರಂದು ಕೆಲಸಕ್ಕೆಂದು ಹೋದವರು 5 ತಿಂಗಳಾದರೂ ಮನೆಗೆ ಬಾರದೆ ಕಾಣೆಯಾಗಿರುವ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಣೆಯಾದವರ ಚಹರೆ : ಎತ್ತರ 5.4 ಅಡಿ, ಎಣ್ಣೆಗೆಂಪು ಮೈ ಬಣ್ಣ, ಕೋಲು ಮುಖ, ಸಾಧಾರಣ ಶರೀರ, ಬಿಳಿ ಮಿಶ್ರಿತ ಕಪ್ಪು ತಲೆಕೂದಲು ಹೊಂದಿರುತ್ತಾರೆ. ಕನ್ನಡ, ಹಿಂದಿ ತುಳು ಮಾತನಾಡುತ್ತಾರೆ.
ಕಾಣೆಯಾದವರ ಬಗ್ಗೆ ಮಾಹಿತಿ ಪತ್ತೆಯಾದಲ್ಲಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ಸಂಪರ್ಕಿಸಬಹುದು ಎಂದು ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

