ಮಂಗಳೂರು: ಕಾಂಗ್ರೆಸ್ ನ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಗ್ಯಾರಂಟಿಗಳ ಬಗ್ಗೆ ವಿಪಕ್ಷವಾದ ಬಿಜೆಪಿ ವಿರೋಧಿಸಿದ್ದು, ದುಡ್ಡ ಸಿಗದು ಎಂದು ಅಪಪ್ರಚಾರ ಮಾಡಿತ್ತು. ಆದರೆ ಐದು ಗ್ಯಾರಂಟಿಗಳೂ ಇದೀಗ ಯಶಸ್ವಿಯಾಗಿ ಜಾರಿಯಾಗಿವೆ. ಇದೀಗ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ ಸಮೀಕ್ಷೆಯನ್ನು ವಿರೋಧಿಸುತ್ತಿರುವ ಬಿಜೆಪಿ ನಾಯಕರು ಪ್ರಧಾನಿ ನರೇಂದ್ರ ಮೋದಿ ನಡೆಸುವ ಜಾತಿ ಗಣತಿಯನ್ನೂ ವಿರೋಧಿಸುತ್ತಿರೆಯೇ ಎಂದು ಎಸ್.ಮಧು ಬಂಗಾರಪ್ಪ ಪ್ರಶ್ನಿಸಿದರು.

ಕೇಂದ್ರ ಸರಕಾರವು ಅವೈಜ್ಞಾನಿಕವಾಗಿ ಜಿಎಸ್ ಟಿ ಜಾರಿಗೊಳಿಸಿ ಇದೀಗ ಕಡಿಮೆ ಮಾಡಿ ಸಂಭ್ರಮ ಪಡುತ್ತಿರುವುದು ಹಾಸ್ಯಾಸ್ಪದ ಎಂದ ಅವರು, ಸಮಾಜದ ಎಲ್ಲಾ ವರ್ಗದ ಜನರಿಗೆ ನ್ಯಾಯಯುತವಾಗಿ ಸರಕಾರದಿಂದ ಸಿಗಬೇಕಾದ ಸೌಲಭ್ಯದ ಹಂಚಿಕೆಗಾಗಿ ನಡೆಯುತ್ತಿರುವ ಸಮೀಕ್ಷೆಗೆ ಎಲ್ಲರ ಸಹಕಾರ ಅಗತ್ಯವಿದೆ.

ದ.ಕ. ಮತ್ತು ಉಡುಪಿಯಲ್ಲಿ ತಾಂತ್ರಿಕ ಕಾರಣದಿಂದ ಸಮೀಕ್ಷೆ ವಿಳಂಬವಾಗಿದೆ. ರಾಜ್ಯದಲ್ಲಿ ನಿನ್ನೆಯವರೆಗೆ ಬೆಂಗಳೂರು ಹೊರತುಪಡಿಸಿ ಒಟ್ಟು ಶೇ.71.5ರಷ್ಟು ಸಮೀಕ್ಷೆ ನಡೆದಿದೆ. ದ.ಕ. ಜಿಲ್ಲೆಯ ಸುಳ್ಯದಲ್ಲಿ ಶೇ.100ರಷ್ಟು ಸಮೀಕ್ಷೆ ಆಗಿದೆ. ಬೆಳ್ತಂಗಡಿಯಲ್ಲೂ ಶೇ.76ರಷ್ಟು ಸಮೀಕ್ಷೆ ಆಗಿದೆ. ಮುಂದೆ ಆಯೋಗದ ತೀರ್ಮಾನದಂತೆ ಸಮೀಕ್ಷೆ ಕಾರ್ಯ ಮುಂದುವರಿಸುವ ನಿರ್ಧಾರವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ  ಹೇಳಿದರು.