ಮಂಗಳೂರು: ಸುಮಾರು 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬಂಧಿಸಲಾಗಿದೆ.

ಬಂಟ್ವಾಳ ನಗರ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 139/2007, ಕಲಂ 366, 368, 420, 120 ಮತ್ತು 149 ಐಪಿಸಿ ಅಡಿಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ, ಕಳೆದ ಸುಮಾರು 5 ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಬಂಟ್ವಾಳ ತಾಲೂಕಿನ ಮಂಚಿ ನಿವಾಸಿ ಇರ್ಷಾದ್ ಅಲಿಯಾಸ್ ಮಹಮ್ಮದ್ ಇರ್ಷಾದ್ ಎಂಬ ವಾರಂಟ್ ಆರೋಪಿಯನ್ನು ಅ. 21 ರಂದು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆತನ ಪಾಸ್‌ಪೋರ್ಟ್‌ ಅನ್ನು ವಶಕ್ಕೆ ಪಡೆಯಲಾಗಿದೆ. ಬಳಿಕ ಮಾನ್ಯ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.