Bengaluru 22°C
Ad

ಬಿ‌.ಸಿ.ರೋಡ್ ಚಲೋ ಕರೆ ಹಿನ್ನಲೆ : ಬಿ.ಸಿ.ರೋಡ್ ನಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್

ಮಂಗಳೂರಿನ ಬಂಟ್ವಾಳದಲ್ಲಿ ವಿಹಿಂಪ ಮುಖಂಡ ಶರಣ್ ಪಂಪ್ ವೆಲ್ ಮಾಡಿದ್ದ ಭಾಷಣಕ್ಕೆ ಆಡಿಯೋ ರಿಲೀಸ್ ಮಾಡಲಾಗಿದ್ದು, ತಾಕತ್ತಿದ್ದರೆ ಸೋಮವಾರದ ಈದ್ ಮಿಲಾದ್ ರ್ಯಾಲಿ ತಡೆಯಿರಿ ಎಂದು ಶರೀಫ್ ಒಡ್ಡಿದ ಸವಾಲು ಸ್ವೀಕರಿಸಿದ ಪುನೀತ್ ಅತ್ತಾವರ ಬಿ.ಸಿ ರೋಡ್ ಚಲೋ ಮಾಡುವುದಾಗಿ ಘೋಷಿಸಿದ್ದರು.

ಮಂಗಳೂರು: ಮಂಗಳೂರಿನ ಬಂಟ್ವಾಳದಲ್ಲಿ ವಿಹಿಂಪ ಮುಖಂಡ ಶರಣ್ ಪಂಪ್ ವೆಲ್ ಮಾಡಿದ್ದ ಭಾಷಣಕ್ಕೆ ಆಡಿಯೋ ರಿಲೀಸ್ ಮಾಡಲಾಗಿದ್ದು, ತಾಕತ್ತಿದ್ದರೆ ಸೋಮವಾರದ ಈದ್ ಮಿಲಾದ್ ರ್ಯಾಲಿ ತಡೆಯಿರಿ ಎಂದು ಶರೀಫ್ ಒಡ್ಡಿದ ಸವಾಲು ಸ್ವೀಕರಿಸಿದ ಪುನೀತ್ ಅತ್ತಾವರ ಬಿ.ಸಿ ರೋಡ್ ಚಲೋ ಮಾಡುವುದಾಗಿ ಘೋಷಿಸಿದ್ದರು. ಈ ನಡುವೆ ಮಧ್ಯರಾತ್ರಿ ಪೊಲೀಸರು ಪುನೀತ್‌ ಅತ್ತಾವರರನ್ನು ಮಂಡ್ಯದಲ್ಲಿ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ

ಈ ಹಿನ್ನಲೆ  ಭಜರಂಗದಳ-ವಿ.ಎಚ್.ಪಿ ಯಿಂದ ಬಿ‌.ಸಿ.ರೋಡ್ ಚಲೋ ಕರೆ ನೀಡಿದ್ದು ಬಿ.ಸಿ.ರೋಡ್ ನಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.ಎಸ್ಪಿ ಯತೀಶ್ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಬಂದೋಬಸ್ತ್ ಮಾಡಲಾಗಿದ್ದು, ಇನ್ನು ಹೆಚ್ಚುವರಿ ಪೊಲೀಸರ ನಿಯೋಜನೆ ಕೂಡ ಮಾಡಲಾಗುವುದು.

Ad
Ad
Nk Channel Final 21 09 2023