ಮಂಗಳೂರು : ಅಸೌಖ್ಯದಿಂದ ಇತ್ತೀಚೆಗೆ ನಿಧನರಾದ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ, ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆಯ ಮುಖ್ಯ ವರದಿಗಾರ ಭುವನೇಂದ್ರ ಪುದುವೆಟ್ಟು ಅವರಿಗೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶ್ರದ್ಧಾಂಜಲಿ ಸಭೆ ನಗರದ ಪತ್ರಿಕಾ ಭವನದಲ್ಲಿ ಗುರುವಾರ ನಡೆಯಿತು.
Ad
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಕಾರ್ಯದರ್ಶಿ ವಿಜಯ ಕೋಟ್ಯಾನ್ ಪಡು,
Ad
ಖಜಾಂಜಿ ಪುಷ್ಪರಾಜ್.ಬಿ.ಎನ್., ಯಶೋಧರ ಕೋಟ್ಯಾನ್, ಹರೀಶ್ ಮೋಟುಕಾನ ನುಡಿ ನಮನ ಸಲ್ಲಿಸಿದರು. ವಿಲ್ಫ್ರೆಡ್ ಡಿಸೋಜಾ, ರಾಜೇಶ್ ಶೆಟ್ಟಿ ದಡ್ಡಂಗಡಿ, ಹರೀಶ್ ಕುಲ್ಕುಂದ, ಶಂಶೀರ್ ಬುಡೋಳಿ ಮುಂತಾದವರು ಉಪಸ್ಥಿತರಿದ್ದರು.
Ad
Ad