ಮಂಗಳೂರು: ಬೈಕ್ ಸವಾರನ ಮೇಲೆ ಲಾರಿ ಹರಿದು ಸವಾರ ಗಂಭೀರವಾಗಿ ಗಾ*ಯಗೊಂಡಿರುವ ಘಟನೆ ಮಂಗಳೂರಿನ ಕೆಪಿಟಿ ಬಳಿ ನಡೆದಿದೆ. ತಲಪಾಡಿ ಕಿನ್ಯಾ ಮೂಲದ ಅಶೋಕ್(44) ಗಂಭೀ*ರವಾಗಿ ಗಾಯಗೊಂಡವರು.
ಯೆಯ್ಯಾಡಿಯಿಂದ ಕೆ.ಪಿ.ಟಿ ಜಂಕ್ಷನ್ ಬಳಿಯ ಪೆಟ್ರೋಲ್ ಪಂಪ್ ಕಡೆ ಬೈಕ್ ಸವಾರ ಬರುತ್ತಿದ್ದರು. ಅದೇ ವೇಳೆ ಪೆಟ್ರೋಲ್ ಪಂಪ್ ಕಡೆಗೆ ಗ್ಯಾಸ್ ತುಂಬಿದ್ದ ಗೂಡ್ಸ್ ಲಾರಿ ಬರುತ್ತಿತ್ತು. ಗೂಡ್ಸ್ ಲಾರಿಯ ಚಾಲಕ ಏಕಾಏಕಿ ಎಡಬದಿಗೆ ತಿರುಗಿಸಿದ್ದರಿಂದ ಬೈಕ್ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ಲಾರಿಯಡಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ದೃಶ್ಯ ಪೆಟ್ರೋಲ್ ಬಂಕ್ನ ಸಿಸಿಟಿವಿಯಲ್ಲಿ ಸೆರೆಯಾಗಿದೆ.

