ಮಂಗಳೂರು: ಬಿಹಾರದಲ್ಲಿ ಎನ್.ಡಿ.ಎ ಭಾರೀ ಮುನ್ನಡೆ ಹಿನ್ನಲೆ ಮಂಗಳೂರಿನಲ್ಲಿ ಬಿಜೆಪಿ ವಿಜಯೋತ್ಸವ ಆಚರಣೆ ಮಾಡಲಾಯಿತು.
ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಚೇರಿ ಎದುರು ಸಂಭ್ರಮಾಚರಣೆ ನಡೆಸಿದರು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಸಂಭ್ರಮಾಚರಣೆ ನಡೆಯಿತು.
ಬಿಜೆಪಿ ಶಾಸಕ ವೇದವ್ಯಾಸ ಕಾಮತ್, ಕ್ಯಾ.ಗಣೇಶ್ ಕಾರ್ಣಿಕ್ ಸೇರಿದಂತೆ ವಿವಿಧ ಮುಖಂಡರು ಭಾಗಿಯಾದರು. ಪರಸ್ಪರ ಸಿಹಿ ಹಂಚಿ ಸಂಭ್ರಮಾಚರಿಸಿದರು.

