Bengaluru 25°C
Ad

ಮಂಗಳೂರು: ತೈಲ ಬೆಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Bjp (2)

ಮಂಗಳೂರು: ತೈಲ ಬೆಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ನಗರದಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಮಂಗಳೂರಿನ ಪಿವಿಎಸ್‌ ವೃತ್ತದಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಕಾರ್ಯಕರ್ತರು ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸಂಸದ ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ ಕಾಮತ್ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

ಇನ್ನು ರಸ್ತೆ ತಡೆ ನಡೆಸಿದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಂಸದ ಬ್ರಿಜೇಶ್ ಚೌಟ , ಶಾಸಕ ವೇದವ್ಯಾಸ್ ಕಾಮತ್ ಸೆರೀದಂತೆ ಬಿಜೆಪಿ ಮುಖಂಡರು ಸದ್ಯ ಪೊಲೀಸರ ವಶದಲ್ಲಿದ್ದಾರೆ.
Chwta

ಇತ್ತ ಪುತ್ತೂರಿನಲ್ಲಿಯೂ ಪ್ರತಿಭಟನೆ ನಡೆಯುತ್ತಿದೆ. ಖಾಸಗಿ ಬಸ್ ನಿಲ್ದಾಣದಿಂದ ಎಸಿ ಕಛೇರಿ ತನಕ ಪಾದಾಯಾತ್ರೆಯ ಮೂಲಕ ಸಾಗಿದ ಬಿಜೆಪಿ ಕಾರ್ಯಕರ್ತರು, ರಾಜ್ಯದಲ್ಲಿ ಕಾಂಗ್ರೇಸ್ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಜನರು ಕಂಗಾಲಾಗಿದ್ದಾರೆ. ಡಿಸೀಲ್,ಪೆಟ್ರೋಲ್ ಬೆಲೆ ಏರಿಕೆಯಿಂದ ಇತರ ವಸ್ತುಗಳಿಗೂ ಬೆಲೆ ಏರಿಕೆಯಾಗಿದೆ. ರಾಜ್ಯ ಸರಕಾರದ ಈ ನಡೆಯನ್ನು ಕೇಂದ್ರ ಸರಕಾರದ ಗಮನಕ್ಕೆ ತರಬೇಕು ಎಂದು ಆಕ್ರೋಶ ಹೊರಹಾಕಿದ್ದಾರೆ.

Puttr

Ad
Ad
Nk Channel Final 21 09 2023
Ad