ಮಂಗಳೂರು: ಮಂಗಳೂರು ಜೈಲ್ ನ ಜಾಮರ್ ನಿಂದ ನೆಟ್ವರ್ಕ್ ಸಮಸ್ಯೆ ಉಂಟಾಗಿದ್ದು, ನೆಟ್ವರ್ಕ್ ಸಮಸ್ಯೆ ಬಗೆಹರಿಸದ ಹಿನ್ನೆಲೆ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು. ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ನೇತ್ರತ್ವದಲ್ಲಿ ಪ್ರೊಟೆಸ್ಟ್ ನಡೆಸಲಾಗಿದೆ.
ಜಿಲ್ಲಾ ಕಾರಾಗೃಹದ ಮುಂಭಾಗ ಪ್ರೊಟೆಸ್ಟ್ ನಡೆಸಿದ್ದು, ಮೊಬೈಲ್ ನ್ನು ನೆಲಕ್ಕೆ ಬಡಿದು ಹುಡಿ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಜೈಲು ಅಧಿಕಾರಿಗಳು, ಆಡಳಿತ ವ್ಯವಸ್ಥೆ ವಿರುದ್ಧ ಪ್ರತಿಭಟನಾಕಾರರ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ನಡುವೆ ಜೈಲಿನೊಳಗೆ ನುಗ್ಗಲು ಯತ್ನಿಸಿದ್ದಾರೆ. ಜೈಲು ಆವರಣದ ಪ್ರವೇಶ ದ್ವಾರದ ಬಳಿ ಪೊಲೀಸರು ತಡೆದಿದ್ದಾರೆ. ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ನೂಕಾಟ ತಳ್ಳಾಟ ನಡೆದಿದೆ. ಶಾಸಕ ವೇದವ್ಯಾಸ್ ಕಾಮತ್ ಸೇರಿದಂತೆ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

