ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಎನ್ಐಎಗೆ ವಹಿಸಲು ಬಿಜೆಪಿ ಕಾರ್ಯಕರ್ತರ ಒತ್ತಾಯಿಸಿದರು. ಹತ್ಯೆಯಲ್ಲಿ ನಿಷೇಧಿತ ಪಿಎಫ್ಐ ಸಂಘಟನೆ ಕಾರ್ಯಕರ್ತರ ಭಾಗಿ ಹಿನ್ನೆಲೆ ಎನ್ಐಎಗೆ ವಹಿಸಲು ಆಗ್ರಹಿಸಿದರು. ಪ್ರಕರಣ ಸಂಬಂಧ ಈಗಾಗಲೇ ಹನ್ನೊಂದು ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಯತ್ನಿಸಿದರು. ಮಂಗಳೂರು ಉತ್ತರ ಬಿಜೆಪಿ ಯುವ ಮೋರ್ಛಾದಿಂದ ಮುಖ್ಯಮಂತ್ರಿಗೆ ಕಪ್ಪು ಬಾವುಟ ಪ್ರದರ್ಶನ ಯತ್ನ ನಡೆಯಿತು.

ಮಂಗಳೂರಿನ ಯೆಯ್ಯಾಡಿ ರಸ್ತೆಯ ಬಳಿ ಸಿಎಂ ಕಾರಿಗೆ ಕಪ್ಪು ಬಾವುಟ ಪ್ರದರ್ಶನ ಯತ್ನ ನಡೆಸಿದರು. ನೂತನ ಡಿಸಿ ಕಚೇರಿ ಉದ್ಘಾಟನೆ ಹಾಗೂ ಉಳ್ಳಾಲ ದರ್ಗಾ ಉರುಸ್ ನಲ್ಲಿ ಭಾಗವಹಿಸಲು ದ್ದರಾಮಯ್ಯ ಆಗಮಿಸಿದರು.

ಮಂಗಳೂರು ಏರ್ಪೋರ್ಟ್ ನಿಂದ ಉರ್ವಾ ಮಾರ್ಕೆಟ್ ಕಡೆಗೆ ಸಿದ್ದರಾಮಯ್ಯ ವಾಹನ ಸಾಗುತ್ತಿತ್ತು, ಈ ವೇಳೆ ಸಿದ್ದರಾಮಯ್ಯ ದಾರಿಯಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ ಬಿಜೆಪಿ ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿದರು.