Bengaluru 23°C
Ad

ದ. ಕ.: 11 ನೇ ಸುತ್ತಿನಲ್ಲಿ 1 ಲಕ್ಷ ಮತಗಳಿಂದ ಮುನ್ನಡೆ ಸಾಧಿಸಿದ ಬಿಜೆಪಿಯ ಚೌಟ

Chowta

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಹನ್ನೊಂದನೇ ಸುತ್ತಿನ ಮತ ಎಣಿಕೆ ಮುಗಿದಿದ್ದು ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 1 ಲಕ್ಷಕ್ಕೂ ಅಧಿಕ ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 4,51,991 ಮತ ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ 3,43,063 ಮತ ಗಳಿಸಿದ್ದಾರೆ. ಸದ್ಯಕ್ಕೆ ಬಿಜೆಪಿ ಅಭ್ಯರ್ಥಿ 1,08,928 ಮತಗಳ ಅಂತರದ ಮುನ್ನಡೆ ಸಾಧಿಸಿದ್ದಾರೆ. ನೋಟಾ ಪರವಾಗಿ 14,013 ಮತಗಳು ಬಿದ್ದಿವೆ.

ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ 1,82,151 ಮತಗಳ ಮುನ್ನಡೆ ಸಾಧಿಸಿದ್ದಾರೆ. ಕೋಟ ಶ್ರೀನಿವಾಸ ಪೂಜಾರಿ 5,27,714 ಮತ ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ 3,45,563 ಮತ ಗಳಿಸಿದ್ದಾರೆ

 

 

Ad
Ad
Nk Channel Final 21 09 2023
Ad