ಬಂಟ್ವಾಳ : ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಯುವಕನೋರ್ವನ ಮೃತದೇಹ ಗುರುವಾರ ಪತ್ತೆಯಾಗಿದೆ. ಬಿ.ಮೂಡ ಗ್ರಾಮದ ಗೂಡಿನಬಳಿ ನಿವಾಸಿ ಮಹಮ್ಮದ್ ಎಂಬವರ ಪುತ್ರ ಇರ್ಫಾನ್ (36) ಅವರ ಮೃತದೇಹ ಎಂದು ತಿಳಿದು ಬಂದಿದೆ.

ಬಂಟ್ವಾಳ ಪುರಸಭೆಯ ಪೌರಕಾರ್ಮಿಕರು ತ್ಯಾಜ್ಯ ನಿರ್ವಹಣೆ ಕಾರ್ಯ ಮಾಡುತ್ತಿದ್ದ ವೇಳೆ ಮೃತದೇಹ ನದಿಯಲ್ಲಿ ಕಂಡು ಬಂದಿದ್ದು, ಬಂಟ್ವಾಳ ನಗರ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಬಂಟ್ವಾಳ ಪೊಲೀಸರು ಹಾಗೂ ಗೂಡಿನ‌ಬಳಿಯ ಸ್ಥಳೀಯರು ಮೃತದೇಹವನ್ನು ಮೇಲಕ್ಕೆತ್ತಿ, ಗುರುತು ಪತ್ತೆ ಹಚ್ಚಲು ಸಾಧ್ಯವಾಗದ ಕಾರಣಕ್ಕಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಗಾರದ ಶೀತಲೀಕರಣದಲ್ಲಿ ಇಡಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.