ಮಂಗಳೂರು : ಮಾಜಿ ಮುಖ್ಯಮಂತ್ರಿ ಶ್ರೀ ಬಿ.ಎಸ್ ಯಡಿಯೂರಪ್ಪರವರ ಸಮಾಜ ಸೇವೆಯ 50 ವರ್ಷ ಆಚರಣೆಯನ್ನು ಪಕ್ಷವು ಚಿತ್ರದುರ್ಗದಲ್ಲಿ ಹಮ್ಮಿಕೊಂಡಿರುವ ‘ಬಿ.ಎಸ್.ವೈ ಅಭಿಮಾನೋತ್ಸವ’ ಕಾರ್ಯಕ್ರಮದ ಅಂಗವಾಗಿ ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಚೇರಿ ಮುಂಭಾಗ ವಾಹನಗಳಿಗೆ ಸ್ಟಿಕ್ಕರ್ ಅಂಟಿಸುವ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಸಂಸದರಾದ ಕ್ಯಾ. ಬ್ರಿಜೇಶ್ ಚೌಟ, ಹಾಗೂ ಬಿ.ಎಸ್.ವೈ ಅಭಿಮಾನೋತ್ಸವದ ದಕ್ಷಿಣ ಕನ್ನಡ ಜಿಲ್ಲಾ ಸಂಚಾಲಕರಾದ ಡಿ. ವೇದವ್ಯಾಸ ಕಾಮತ್, ಶಾಸಕರುಗಳಾದ ಭರತ್ ಶೆಟ್ಟಿ, ಕಿಶೋರ್ ಕುಮಾರ್ ಪುತ್ತೂರು, ಪ್ರಮುಖರಾದ ಪ್ರೇಮಾನಂದ ಶೆಟ್ಟಿ, ರಮೇಶ್ ಕಂಡೆಟ್ಟು, ವಾಹನಗಳಿಗೆ ಸ್ಟಿಕ್ಕರ್ ಅಂಟಿಸುವ ಅಭಿಯಾನಕ್ಕೆ ಚಾಲನೆ ನೀಡಿದರು ಸಂಕೇತಿಕವಾಗಿ ಕೆಲವೊಂದು ವಾಹನಗಳಿಗೆ ಸ್ಟಿಕ್ಕರ್ ಅಂಟಿಸಲಾಯಿತ್ತು