Bengaluru 22°C
Ad

ಕಾರ್ಯಕರ್ತರ ಶಕ್ತಿಗಾಗಿ ಪೊಲೀಸರಿಗೆ ಬೈದದ್ದು ಅಧಿಕಾರಕ್ಕಾಗಿ ಅಲ್ಲ : ಶಾಸಕ ಹರೀಶ್ ಪೂಂಜಾ

ದ್ವೇಷದ ರಾಜಕಾರಣ ಮಾಡಿದರೆ ಒಪ್ಪುದಿಲ್ಲ ಎಂದು ಪೊಲೀಸರ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದೇವೆ, ಅದನ್ನೇ ನೆಪವಾಗಿ ಇಟ್ಟು ಮೂರು ಕೇಸ್ ಹಾಕಿದ್ದಾರೆ. ಕಾರ್ಯಕರ್ತರ ಶಕ್ತಿಗಾಗಿ ಪೊಲೀಸರಿಗೆ ಬೈದದ್ದು ಅಧಿಕಾರಕ್ಕಾಗಿ ಅಲ್ಲ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೇಳಿದರು.

ಮಂಗಳೂರು: ಪ್ರಕರಣದಲ್ಲಿ ಇಲ್ಲದ ಒಬ್ಬ ಅಮಾಯಕ ಬಿಜೆಪಿಯಲ್ಲಿ ಮುಂಚೂಣಿಯಲ್ಲಿ ಇದ್ದಾನೆ ಎಂಬ ಕಾರಣಕ್ಕೆ ಬಂಧನ ಮಾಡಿದ್ದಾರೆ. ಅದನ್ನು ಜನ ಪ್ರತಿನಿಧಿಯಾಗಿ ಖಂಡಿಸಿದ್ದಾರೆ. ಈ ಕಾರಣಕ್ಕಾಗಿ ದ್ವೇಷದ ರಾಜಕಾರಣ ಮಾಡಿದರೆ ಒಪ್ಪುದಿಲ್ಲ ಎಂದು ಪೊಲೀಸರ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದೇವೆ, ಅದನ್ನೇ ನೆಪವಾಗಿ ಇಟ್ಟು ಮೂರು ಕೇಸ್ ಹಾಕಿದ್ದಾರೆ. ಕಾರ್ಯಕರ್ತರ ಶಕ್ತಿಗಾಗಿ ಪೊಲೀಸರಿಗೆ ಬೈದದ್ದು ಅಧಿಕಾರಕ್ಕಾಗಿ ಅಲ್ಲ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೇಳಿದರು.

ಅಧಿಕಾರಕ್ಕೆ ನಾನು ಪೊಲೀಸರಿಗೆ ಬೈದಿಲ್ಲ, ಸಿದ್ದರಾಮಯ್ಯ ಅಧಿಕಾರಕ್ಕಾಗಿ ಪೊಲೀಸ್ ಅಧಿಕಾರಿ ಬಿದರಿ ಕಾಲರ್ ಪಟ್ಟಿ ಹಿಡಿದಿಲ್ವಾ, ಕಾಂಗ್ರೆಸ್‌ಗೆ ನೈತಿಕತೆ ಇಲ್ಲ ಪೊಲೀಸರ ಮೇಲೆ ಹೆಚ್ಚಿನ ದೌಜನ್ಯ ಮಾಡಿರುವುದು ಕಾಂಗ್ರೆಸ್, ಬಿಜೆಪಿ ನಾಯಕರಿಗೆ ಬುದ್ದಿ ಹೇಳುವ ಅವಶ್ಯಕತೆ ಇಲ್ಲ ಎಂದರು.

ತುರ್ತು ಪರಿಸ್ಥಿತಿಯಿಂದ ಹಿಡಿದು ಅವತಿನಿಂದ ಇವತ್ತಿನ ವರೆಗೆ ಪೊಲೀಸರನ್ನು ಹಿಡಿದುಕೊಂಡು ಕಾಂಗ್ರೆಸ್ ದೌಜನ್ಯ ಮಾಡುತ್ತಿದೆ. ಪ್ರಜ್ವಲ್ ರೇವಣ್ಣ ಪ್ರಕರಣ ಆದಾಗ ಕಾಂಗ್ರೆಸ್ ಪ್ರತಿಭಟನೆ ಮಾಡಿತ್ತಲ್ವಾ ಆವಾಗ ಯಾವ ನ್ಯಾಯ ಕಾನೂನು ಇತ್ತು. ಬಿಜೆಪಿ ಕಾರ್ಯಕರ್ತನಿಗೆ ಅನ್ಯಾಯ ಆದಾಗ ಪ್ರತಿಭಟನೆಗೆ ಅವಕಾಶ ನೀಡುದಿಲ್ಲ ಇದು ಯಾವ ನ್ಯಾಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಬೆಳ್ತಂಗಡಿಗೆ ಬಂದ ಮೇಲೆ FIR ಮಾಡಿದ್ದಾರೆ. ತಾಕತ್ತು ಇದ್ರೆ ಬರುದಕ್ಕೆ ಮೊದಲು ಕೇಸ್ ಹಾಕಬಹುದಿತಲ್ವಾ, ಬಿಜೆಪಿ ಕಾರ್ಯಕರ್ತರನ್ನು ಮುಟ್ಟುವ ತಾಕತ್ತು ಇಲ್ಲ. ಬಿಸ್ಕೆಟನ್ನು ಬಿರಿಯಾನಿ ರೀತಿ ತಿಂದಿ ನಮ್ಮ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ನಾನು ಹೈಕೋರ್ಟ್ ನಲ್ಲಿ ಕಾನೂನು ವೃತ್ತಿ ಮಾಡಿ ಬಂದವನು ಕಾನೂನಿನ ಬಗ್ಗೆ ಪೊಲೀಸ್ ಇಲಾಖೆ ಪಾಠ ಮಾಡುವ ಅಗತ್ಯ ಇಲ್ಲ, ವಿಚಾರಣೆಗೆ ಮುಂದೆ ಹಾಜರಾಗುತ್ತೇನೆ ಎಂದು ಶಾಸಕ ಹರೀಶ್ ಪೂಂಜಾ ಹೇಳಿದರು.

Ad
Ad
Nk Channel Final 21 09 2023
Ad