ಮಂಗಳೂರು: ಪದವಿನಂಗಡಿ ಪರಿಸರದಲ್ಲಿರುವ ಮನೆಯಿಂದ ಎಂಡಿಎಂಎ ಮಾದಕ ವಸ್ತುವನ್ನು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು, ಕಾರ್ಯಾಚರಣೆ ನಡೆಸಿ ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿಯಿಂದ ಸುಮಾರು ₹6,00,000 ಮೌಲ್ಯದ 60 ಗ್ರಾಂ ಎಂಡಿಎಂಎ ಹಾಗೂ ಜಿಪ್-ಲಾಕ್ ಕವರ್ಗಳು, ಒಂದು ಮೊಬೈಲ್ ಫೋನ್ ಹಾಗೂ ಡಿಜಿಟಲ್ ತೂಕಮಾಪನ ಯಂತ್ರವನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಧನರಾಜ್ ಪೂಜಾರಿ @ ಧನು ವಳಚಿಲ್ ಪ್ರಾಯ: 33 ವರ್ಷ, ಆರೋಪಿ ಧನರಾಜ್ ಪೂಜಾರಿ @ ಧನು ವಳಚಿಲ್ ಎಂಬಾತನ ಮೇಲೆ ಮಂಗಳೂರು ದಕ್ಷಿಣ, ಉತ್ತರ, ಸುರತ್ಕಲ್, ಬರ್ಕೆ, ಕಾವೂರು, ಕಂಕನಾಡಿ ನಗರ ಹಾಗೂ ಬಂಟ್ವಾಳ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆಯತ್ನ, ಹಲ್ಲೆ, ಬೆದರಿಕೆ ಸೇರಿದಂತೆ ಸುಮಾರು 12 ಪ್ರಕರಣಗಳು ದಾಖಲಾಗಿವೆ.
2016ರಲ್ಲಿ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಗಂಭೀರ ಹಲ್ಲೆ ಪ್ರಕರಣದಲ್ಲಿ ಆರೋಪಿಗೆ 3 ವರ್ಷಗಳ ಶಿಕ್ಷೆಯೂ ವಿಧಿಸಲಾಗಿತ್ತು. ಈ ಮಾದಕವಸ್ತು ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ.

