ಮಂಗಳೂರು : ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಹೈಡ್ರೋವೀಡ್ ಗಾಂಜಾ, ಚರಸ್ ಹಾಗೂ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಯುವಕರಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿ ಅವರ ವಶದಿಂದ 9 ಲಕ್ಷ ಮೌಲ್ಯದ ಹೈಡ್ರೋವಿಡ್ ಗಾಂಜಾ, ಚರಸ್, ಗಾಂಜಾ ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.
ಬೆಂಗಳೂರಿನಿಂದ ಮಾದಕ ವಸ್ತುವಾದ ಹೈಡ್ರೋವೀಡ್ ಗಾಂಜಾ, ಚರಸ್ ಹಾಗೂ ಗಾಂಜಾವನ್ನು ಖರೀದಿಸಿಕೊಂಡು ಮಂಗಳೂರು ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಶಿವಭಾಗ್ 5 ನೇ ಕ್ರಾಸ್ ರಸ್ತೆಯಲ್ಲಿ ಮಾದಕ ವಸ್ತುವನ್ನು ಹೊಂದಿಕೊಂಡು ಮಾರಾಟ ಮಾಡುತ್ತಿದ್ದ ತೈಸಿರ್ ಇಸ್ಮಾಯಿಲ್ ಹುಸೈನ್(23), 2 ನೇ ಕ್ರಾಸ್ ರಸ್ತೆ, ಸುಭಾಷ್ ನಗರ, ಪಾಂಡೇಶ್ವರ, ಮಂಗಳೂರಿನಲ್ಲಿ ವಾಸವಿದ್ದರು.
ರೋಯಸ್ಟನ್ ಕ್ಸವಿಯರ್ ಲೋಬೋ(22), ಬೋಳಂಗಡಿ ಹೌಸ್ ಬಂಟ್ವಾಳ, ಪಾಣೆ ಮಂಗಳೂರಿನಲ್ಲಿ ವಾಸವಿದ್ದರು. ಹಾಲಿ ಮೋತಿಶ್ಯಾಂ ಕಾಸ್ಟೆಲ್ ಆಪಾರ್ಟ್ ಮೆಂಟ್, ಶಿವಭಾಗ್, ಮಂಗಳೂರು ವಾಸವಿದ್ದರು. ಇವರುಗಳನ್ನು ವಶಕ್ಕೆ ಪಡೆದುಕೊಂಡು 8,00,000/- ಮೌಲ್ಯದ ನಿಷೇಧಿತ ಮಾದಕ ವಸ್ತುವಾದ ಹೈಡ್ರೋವೀಡ್, ಗಾಂಜಾ,ಚರಸ್ ಮತ್ತು ಗಾಂಜಾವನ್ನು ಹಾಗೂ 2 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿಗಳಿಂದ ವಶಪಡಿಸಿಕೊಂಡ ಸೊತ್ತಿನ ಮೌಲ್ಯ ರೂ. 9 ಲಕ್ಷ ಆಗಬಹುದು. ಈ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಆರೋಪಿಗಳು ಐಷಾರಾಮಿ ಜೀವನ ಸಾಗಿಸುವ ಉದ್ದೇಶದಿಂದ ಮಾದಕ ವಸ್ತು ಮಾರಾಟದ ದಂಧೆಯನ್ನು ನಡೆಸುತ್ತಿದ್ದರು. ಈ ಮಾದಕ ವಸ್ತು ಹೈಡ್ರೋವೀಡ್, ಚರಸ್ ಹಾಗೂ ಗಾಂಜಾ ಮಾರಾಟದ ಆರೋಪಿಗಳ ಹಾಗೂ ಸೊತ್ತುಗಳ ಪತ್ತೆ ಕಾರ್ಯವನ್ನು ಮಾನ್ಯ ಪೊಲೀಸ್ ಆಯುಕ್ತರಾದ ಶ್ರೀ ಅನುಪಮ್ ಅಗ್ರವಾಲ್ IPS ರವರ ಮಾರ್ಗದರ್ಶನದಲ್ಲಿ,
ಉಪ ಪೊಲೀಸ್ ಆಯುಕ್ತರು( ಕಾನೂನು & ಸುವ್ಯವಸ್ಥೆ ವಿಭಾಗ) ರವರಾದ ಶ್ರೀ ಸಿದ್ದಾರ್ಥ ಗೋಯಲ್, IPS ಮತ್ತು ಉಪ ಪೊಲೀಸ್ ಆಯುಕ್ತರು (ಅಪರಾಧ ಮತ್ತು ಸಂಚಾರ ವಿಭಾಗ) ರವರಾದ ಶ್ರೀ ಕೆ.ರವಿಶಂಕರ್, KSPS ರವರ ನಿರ್ದೇಶನದಲ್ಲಿ ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ರವರ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ರಫೀಕ್ ಕೆ ಎಂ, ಪಿಎಸ್ಐ ನರೇಂದ್ರ, ಎಎಸ್ಐ ಯವರಾದ ರಾಮ ಪೂಜಾರಿ, ಶೀನಪ್ಪ, ಸುಜನ್ ಶೆಟ್ಟಿ ಮತ್ತು ಸಿಸಿಬಿ ಘಟಕದ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

