ಮಂಗಳೂರು : ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನವನ್ನು ನಗರದ ಕುದ್ಮುಲ್ ರಂಗರಾವ್ ಪುರಭವನದ ಮುಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಆಚರಿಸಲಾಯಿತು.

ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಈ ಕಾರ್ಯಕ್ರಮ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ , ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮತ್ತಿತರ ಅಧಿಕಾರಿಗಳು ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.

