ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಲೆಕ್ಷನ್ ಮಾಸ್ಟರ್ ಎಂದು ಪೋಸ್ಟ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಶಾಸಕನ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಅವಮಾನ ಅಗುವ ರೀತಿಯಲ್ಲಿ ನಿವಾಸದ ಫೋಟೋ ಮತ್ತು ಕಚೇರಿಯಲ್ಲಿ ಕುಳಿತಿರುವ ಫೋಟೋಗಳನ್ನು ಬಳಸಿ ಅದನ್ನು ಎಡಿಟ್ ಮಾಡಿ ಸಿದ್ದರಾಮಯ್ಯ ಕಲೆಕ್ಟರ್ ಮಾಸ್ಟರ್ (CM) ಎಂದು ಹಾಕಿರುವ ಬಗ್ಗೆ ಬೆಳ್ತಂಗಡಿ ಕಾಂಗ್ರೆಸ್ ಮುಖಂಡ ಶೇಖರ್ ಕುಕ್ಕೇಡಿ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಬೆಳ್ತಂಗಡಿ ಪೊಲೀಸರು 26/10/2023 0 IPC 1860(U/s-504,505(2)) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು
Ad