ಮಂಗಳೂರು: ಕೇರಳ ರಾಜ್ಯದ ವಿಧಾನಸಭೆ ಚುನಾವಣೆ ಹಿನ್ನೆಲೆ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗಿಯಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರಿಗೆ ಆಗಮಿಸಿ ರಸ್ತೆ ಮೂಲಕ ಕೇರಳಕ್ಕೆ ತೆರಳಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣಕ್ಕೆ ಸಿ.ಎಂ ಸಿದ್ದರಾಮಯ್ಯ ಆಗಮಿಸಿದ್ದರು. ಮಂಜೇಶ್ವರ ವಿಧಾನಸಭಾ ಕ್ಷೇತ್ರದ UDF ಅಭ್ಯರ್ಥಿ ಎ.ಕೆ.ಎಂ.ಅಶ್ರಫ್ ಪರ ಸಿದ್ದರಾಮಯ್ಯ ಮತ ಯಾಚನೆ ಮಾಡಲಿದ್ದಾರೆ. ವಿಶೇಷ ವಿಮಾನದ ಮೂಲಕ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಸಿ.ಎಂ ಸಿದ್ದರಾಮಯ್ಯ ಗೆ ವಿಮಾನ ನಿಲ್ದಾಣದಲ್ಲಿ ಸ್ವಾಗತ ಕೋರಲಾಯಿತು. ರಸ್ತೆ ಮಾರ್ಗದ ಮೂಲಕ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ವರ್ಕಾಡಿಗೆ ಸಿ.ಎಂ ಸಿದ್ದರಾಮಯ್ಯ ತೆರಳಿದರು. ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡದೆ ಸಿ.ಎಂ ತೆರಳಿದರು.

