ಮಂಗಳೂರು : ಧರ್ಮಸ್ಥಳ ಪ್ರಕರಣದಲ್ಲಿ ಚಿನ್ನಯ್ಯನ ಹೇಳಿಕೆ ನೀಡುವ ಕಾರ್ಯ ಪೂರ್ಣಗೊಂಡಿದೆ. ಬೆಳ್ತಂಗಡಿ ಕೋರ್ಟ್ ಗೆ ಸೆ.27 ರಂದು ಬೆಳಗ್ಗೆ ಶಿವಮೊಗ್ಗ ಪೊಲೀಸರು ಕರೆದುಕೊಂಡು ಬಂದಿದ್ದರು.

ನ್ಯಾಯಾಧೀಶರ ಮುಂದೆ BNSS 183 ಹೇಳಿಕೆ ನೀಡಿದ್ದಾನೆ. ಸಾಕ್ಷಿ ದೂರುದಾರನಾಗಿ ಬಂದು ಬಳಿಕ ಆರೋಪಿಯಾದ ಚಿನ್ನಯ್ಯನ್ನು ಎಸ್.ಐ.ಟಿ ಬಂಧಿಸಿ ಆತನ ವಿರುದ್ಧ ಪ್ರಕರಣ ದಾಖಲಿಸಿತ್ತು. ಈ ವೇಳೆ ಚಿನ್ನಯ್ಯ ತಾನು ಆರಂಭದಲ್ಲಿ ನ್ಯಾಯಾಧೀಶರ ಮುಂದೆ ನೀಡಿದ್ದ ಹೇಳಿಕೆಗೆ ಬದ್ಧನಾಗಿಲ್ಲ ಎಂದೂ ಹೊಸ ಹೇಳಿಕೆ ನೀಡುವುದಾಗಿಯೂ ಕೇಳಿಕೊಂಡಿದ್ದ. ಅದರಂತೆ ಆತನ ಹೇಳಿಕೆ ದಾಖಲಿಸಲು ದಿನ ನಿಗದಿಪಡಿಸಲಾಗಿತ್ತು.

ಸೆ.23ರಂದು ಆತ ಹೇಳಿಕೆ ನೀಡಲು ಆರಂಭಿಸಿದ್ದ. ಹೇಳಿಕೆ ಪೂರ್ಣಗೊಳ್ಳದ ಹಿನ್ನಲೆಯಲ್ಲಿ ಸೆ.25ರಂದು ಹಾಗೂ ಸೆ27ರಂದು ಹೀಗೆ ಮೂರು ದಿನಗಳ ಕಾಲ ಆತನ ಹೇಳಿಕೆ ದಾಖಲಿಸುವ ಕಾರ್ಯ ನಡೆದಿತ್ತು. ಇಂದು ಸಂಜೆಯ ವೇಳೆಗೆ ಆತನ ಹೇಳಿಕೆ ಪೂರ್ಣಗೊಂಡಿದ್ದು ಆತನನ್ನು ಮರಳಿ ಶಿವಮೊಗ್ಗ ಜೈಲಿಗೆ ಕಳುಹಿಸಲಾಗಿದೆ.