ದಕ್ಷಿಣ ಕನ್ನಡ : ಸಿಎಂ ಸಿದ್ದರಾಮಯ್ಯ ವಿರುದ್ದ ಹೇಳಿಕೆ ನೀಡಿರುವ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಇದೀಗ ಅರೆಸ್ಟ್ ಭೀತಿ ಎದುರಾಗಿದ್ದು, ಸಂಜೆಯೊಳಗೆ ಅವರನ್ನು ಅರಸ್ಟ್ ಮಾಡುವಂತೆ ಗೃಹ ಸಚಿವ ಜಿ. ಪರಮೇಶ್ವರ್‌  ಪೊಲೀಸರಿಗೆ ಸೂಚನೆ ನೀಡಿದ್ದಾರೆ ಎಂದು ವರದಿಯಾಗಿದೆ.

ಮುಖ್ಯಮಂತ್ರಿಗಳು 24 ಕೊಲೆ ಮಾಡಿದ್ದಾರೆಂದು ತಿಮರೋಡಿ ಹೇಳಿದ್ದ ಹಳೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು, ಅದರ ಬೆನ್ನಲ್ಲೇ ಇಂದು ವಿಧಾನಸಭೆಯಲ್ಲಿ ಈ ವಿಚಾರ ಪ್ರಸ್ತಾಪಿಸಿದ ವಿಪಕ್ಷ ಬಿಜೆಪಿ . ಸಿಎಂ ವಿರುದ್ಧವೇ ಮಾತನಾಡಿದವನನ್ನಾ ಸುಮ್ನೆ ಬಿಡಬೇಕಾ ಅಂತಲೂ ಪ್ರಶ್ನೆ ಮಾಡಿದರು.

ವಿಪಕ್ಷ ನಾಯಕ ಆರ್‌. ಅಶೋಕ್‌ ಮಾತನಾಡುತ್ತಾ, ಸಿಎಂ 24 ಕೊಲೆ ಮಾಡಿದ್ದಾರೆಂಬ ಆರೋಪ ಬಗ್ಗೆ ಪ್ರಸ್ತಾಪ ಮಾಡಿದರು. ಏನ್ ನಡೀತಿದೆ ರಾಜ್ಯದಲ್ಲಿ, ಸಿಎಂ ಮೇಲೆಯೇ ಆಪಾದನೆ ಮಾಡಿದ್ದಾರೆ. ಹಾಗಾದರೆ ಸಿಎಂ ಕೊಲೆಗಾರರಾ? ಆರೋಪ ಮಾಡಿದವರ ಮೇಲೆ ಕ್ರಮ ಏನು? ನೀವು ಮೌನವಾಗಿದ್ರೆ ಏನ್ ತಿಳ್ಕೊಳ್ಳೋದು ನಾವು? ಅಂತ‌ ಪ್ರಶ್ನೆ ಮಾಡಿದರು.

ಇದಕ್ಕೆ ಉತ್ತರ ಕೊಟ್ಟ ಪರಮೇಶ್ವರ್‌ ಸರ್ಕಾರ ಅಷ್ಟೊಂದು ಹೆಲ್ಪ್ ಲೆಸ್ ಆಗಿದೆ ಅನ್ಕೊಂಡಿದ್ದೀರಾ? ಅಂತ ತಿರುಗೇಟು ಕೊಟ್ಟರು. ಈ ವೇಳೆ ಸುನೀಲ್‌ ಕುಮಾರ್‌ ದೇಶದ ನಂ.1 ಗೃಹ ಸಚಿವರು ಕ್ರಮ ತಗೊಳ್ಳಿ ಅಂತ ಕಾಲೆಳೆದರು. ನಂತ್ರ ಮಾತು ಮುಂದುವರಿಸಿದ ಪರಂ, ಆ ವ್ಯಕ್ತಿ ವಿರುದ್ಧ ಹಲವು ಕೇಸ್ ಇವೆ, ಆ ವ್ಯಕ್ತಿ ಹೆಸರು ಹೇಳಲ್ಲ. ಇಂಥ ವ್ಯಕ್ತಿಯನ್ನು ಸಮಾಜದಲ್ಲಿ ಹೀಗೇ ಸುಮ್ಮನೆ ಬಿಡಲ್ಲ. ಕಾನೂನು ಚಲಾಯಿಸಿ ಕ್ರಮ ತಗೋತೀವಿ. ಏನು ಕ್ರಮ ತಗೋಬೇಕೋ ತಗೋತೀವಿ. ಈಗಾಗಲೇ ಕ್ರಮ ತಗೊಳ್ಳೋಕ್ಕೆ ಪೊಲೀಸರಿಗೆ ಸೂಚನೆ ಕೊಡಲಾಗಿದೆ ಎಂದು ತಿಳಿಸಿದರು.

ಹೇಳಿಕೆ ನೀಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಸೂಚನೆ ನೀಡಿದರು. ಹಿರಿಯ ಪೊಲೀಸ್‌ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿದ ಪರಮೇಶ್ವರ್‌ ಅರೆಸ್ಟ್‌ ಮಾಡುವಂತೆ ಸೂಚನೆ ನೀಡಿದರು.