ಮಂಗಳೂರು: ವ್ಯಕ್ತಿಯೊಬ್ಬರು ಎಂ.ಸಿ.ಸಿ. ಬ್ಯಾಂಕಿನಿಂದ ಸಾಲ️ವನ್ನು ಪಡೆದಿದ್ದು, ಕ್ಲಪ್ತ ಸಮಯದಲ್ಲಿ ಮರುಪಾವತಿ ಮಾಡದೇ ಇದ್ದರಿಂದ ಸಾಲ️ ವಸೂಲಾತಿಗಾಗಿ ಕಾನೂನಿನ ಅವಕಾಶದಡಿ ವಸೂಲಾತಿ ಕ್ರಮ ಕೈಗೊಳ್ಳಲಾಗಿತ್ತು.

ಅದಲ್ಲದದೆ ಸಾಲ️ಗಾರರಿಗೆ ಬಡ್ಡಿಯಲ್ಲಿ ರಿಯಾಯಿತಿ ನೀಡಿ ಸಾಲ️ವನ್ನು ಮರುಪಾವತಿ ಮಾಡಲು ಒಂದು ಅವಕಾಶವನ್ನು ಸಹ ನೀಡಲಾಗಿತ್ತು. ಆದರೂ ಸಾಲ️ಗಾರರು ಸಾಲ️ವನ್ನು ಮರುಪಾವತಿ ಮಾಡಿರುವುದಿಲ್ಲ.

ಸಾಲ️ಗಾರರು ತಮ್ಮ ಉಳಿತಾಯ ಖಾತೆಯನ್ನು ವಯುಕ್ತಿಕ ನೆಲೆಯಲ್ಲಿ ವ್ಯವಹರಿಸುತ್ತಾ ಬಂದಿರುತ್ತಾರೆ. ಅದರಲ್ಲಿ ಯಾರು ಮಧ್ಯ ಪ್ರವೇಶಿಸಿರುವುದಿಲ್ಲ. ಅವರು ತಮ್ಮ ವಯುಕ್ತಿಕ ಸಮಸ್ಯೆಯಿಂದ ಈ ಕೃತ್ಯವನ್ನು ಎಸಗಿದ್ದು,

ಅನಾವಶ್ಯಕವಾಗಿ ಬ್ಯಾಂಕಿನ ಅಧ್ಯಕ್ಷರ ಹೆಸರನ್ನು ಬಳಸಿ ಅಧ್ಯಕ್ಷರ ಮತ್ತು ಬ್ಯಾಂಕಿನ ಹೆಸರು ಹಾಳು ಮಾಡುವ ಪ್ರಯತ್ನ ಮಾಡಲಾಗಿದೆ. ಆದ್ದರಿಂದ ಸಾರ್ವಜನಿಕರು ಹಾಗೂ ಬ್ಯಾಂಕಿನ ಗ್ರಾಹಕರು ಸಾಮಾಜಿಕ ಜಾಲ️ತಾಣದಲ್ಲಿ ಹರಿದಾಡುತ್ತಿರುವ ತಪ್ಪು ಹೇಳಿಕೆಗಳಿಗೆ ಕಿವಿಕೊಡಬಾರದಾಗಿ ತಿಳಿಯಪಡಿಸಲಾಗಿದೆ.