Bengaluru 29°C
Ad

ಬಿಜೆಪಿಯವರು ಬಜೆಟ್ ಓದುವುದಿಲ್ಲ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ

ಪೂರ್ವ ಮುಂಗಾರು ಮಳೆ ಪ್ರಾರಂಭವಾಗಿದೆ ಈ ಬಾರಿ ನೀತಿ ಸಂಹಿತೆ ಅನುಷ್ಠಾನದ ಅವಧಿ ಸುದೀರ್ಘವಾಗಿತ್ತು. ಸರ್ಕಾರದ ಆಡಳಿತವನ್ನು ನಿಧಾನವಾಗಿಸಿತ್ತು. ಎಲ್ಲ ಜಿಲ್ಲಾಧಿಕಾರಿಗಳು ಚುನಾವಣಾಧಿಕಾರಿಗಳಾಗಿದ್ದರು,

ಮಂಗಳೂರು: ಬಿಜೆಪಿಯವರು ಬಜೆಟ್ ಓದುವುದಿಲ್ಲ ಅವರಿಗೆ ಅರ್ಥಶಾಸ್ತ್ರ ಗೊತ್ತಾಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಬಜಪೆ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ   ಮಾತನಾಡಿದ ಅವರು, ‘ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ… ಅಭಿವೃದ್ಧಿ ಶೂನ್ಯ.. ಎಂದು ಬಿಜೆಪಿಯವರು ಹೇಳುತ್ತಾರೆ. ಬಡವರನ್ನು ಆರ್ಥಿಕವಾಗಿ ಸಬಲರನ್ನಾಗಿಸುವುದು ಅಭಿವೃದ್ಧಿ ಅಲ್ಲವೇ. ನಮ್ಮ ಸರ್ಕಾರ ಬಂದು ಒಂದು ವರ್ಷವಾಗಿದೆ.

ನಾವು ಏನೇನು ಕೆಲಸ ಕಾರ್ಯ ಮಾಡಿದ್ದೇವೆ ಎಂದು ಜನರಿಗೆ ತಿಳಿಸಿದ್ದೇವೆ. ಬಿಜೆಪಿಯವರು ಸುಳ್ಳು ಹೇಳುತ್ತಾರೆ. ನೀವು ಸುಳ್ಳು ಹೇಳುತ್ತೀರಾ’ ಎಂದು ಪ್ರಶ್ನಿಸಿದರು. ‘ದೇಶಕ್ಕೆ ರಾಜಕೀಯ ಸ್ವಾತಂತ್ರ್ಯ ಬಂದರೆ ಸಾಲದು. ಜನರಿಗೆ ಆರ್ಥಿಕ ಮತ್ತು ಸಾಮಾಜಿಕ ಶಕ್ತಿ ಬಂದಾಗ ಮಾತ್ರ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥ ಬರುತ್ತದೆ. ಅಂಬೇಡ್ಕರ್ ಅವರೂ ಇದೇ ಮಾತನ್ನು ಹೇಳಿದ್ದರು. ನಮ್ಮ ಸರ್ಕಾರ ಬಂದು ಒಂದು ವರ್ಷವಾಗಿದೆ. ನಾವು ಏನೇನು ಮಾಡಿದ್ದೇವೆ ಅಂತ ಜನರಿಗೆ ತಿಳಿಸಿದ್ದೇವೆ. ಬಿಜೆಪಿಯವರು ಸುಳ್ಳು ಹೇಳುತ್ತಾರೆ, ನೀವು ಸುಳ್ಳು ಹೇಳುತ್ತೀರಾ ?. ನೀರಾವರಿಗೆ 16000 ಕೋಟಿ ರೂ ಇತ್ತು ಈ ವರ್ಷ 18 ಸಾವಿರ ಕೋಟಿ ಇಟ್ಟಿದ್ದೇವೆ. ಏನು ಮಾಡಿಲ್ಲ ಅಂತ ಅಂದ್ರೆ ಏನು ಹೇಳುವುದು. ಗ್ಯಾರೆಂಟಿಯನ್ನು ಸೇರಿಸಿ ಒಂದು ಲಕ್ಷದ 20 ಸಾವಿರ ಕೋಟಿ ಬಜೆಟ್ ಕೊಟ್ಟಿದ್ದೇವೆ ಎಂದರು.

 

Ad
Ad
Nk Channel Final 21 09 2023
Ad