ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರು ಹಾಗೂ ಗಾಂಂಧಿ ಸಂವಾದ ನೂರನೇ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಿಎಂ ಸಿದ್ದರಾಮಯ್ಯ ಮಂಗಳೂರಿಗೆ ಆಗಮಿಸಿದ್ದಾರೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರನ್ನು ಸಕಲ ಸರಕಾರಿ ಗೌರವಗಳೊಂದಿಗೆ ಸ್ವಾಗತಿಸಲಾಯಿತು.

ಮುಖ್ಯಮಂತ್ರಿಗಳೊಂದಿಗೆ ಸಚಿವರಾದ ಅಹಿಂದ ಮುಖಂಡರಾದ ದಿನೇಶ್ ಗುಂಡೂರಾವ್, ಲಕ್ಷ್ಮೀ ಹೆಬ್ಬಾಳ್ಕರ್, ಸತೀಶ್ ಜಾರಕಿಹೊಳಿ, ಝಮೀರ್ ಅಹ್ಮದ್ ಮತ್ತಿತರರು ಉಪಸ್ಥಿತರಿದ್ದರು. ಸಿದ್ದರಾಮಯ್ಯ ಪರ ಘೋಷಣೆ ಕೇಳಿ ಬಂದಿದೆ.